ಬೆಂಗಳೂರು: ನಗರದ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಹೊತ್ತಿಕೊಂಡು ಇಬ್ಬರು ಮೃತಪಟ್ಟ ಪ್ರಕರಣ ಹಸಿರಾಗಿರುವಾಗಲೇ ಇದೀಗ ಮತ್ತೊಂದು ಘೋರ ದುರಂತ ಸಂಭವಿಸಿದೆ. ಚಾಮರಾಜಪೇಟೆಯ ಲಾರಿ ಸರ್ವೀಸ್ ಗೋಡೌನ್ ನಲ್ಲಿ ಸ್ಪೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ, ಸ್ಫೋಟದ ತೀವ್ರತೆಗೆ ಮೃತಪಟ್ಟವರ ದೇಹಗಳು ಛಿದ್ರವಾಗಿವೆ. ಚಾಮರಾಜಪೇಟೆಯಲ್ಲಿ ಸ್ಫೋಟವಾಗಿದ್ದು ಏನು..? ಸಿಲಿಂಡರ್ ಬ್ಲಾಸ್ಟ್ ಆಗಿಲ್ಲ..ಕಂಪ್ರೆಸರ್ ಸ್ಫೋಟಿಸಿಲ್ಲ ಶಾರ್ಟ್ ಸರ್ಕೂಟ್ನಿಂದಲೂ ಬೆಂಕಿ ಹೊತ್ತಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇಲ್ಲಿ ಸ್ಫೊಟಗೊಂಡಿರುವುದು ಏನು ಎಂಬ ಪ್ರಶ್ನೆ ಪೊಲೀಸರನ್ನು ಕಾಡುತ್ತಿದೆ.
ಸ್ಫೋಟಕ ಸ್ಫೋಟಿಸಿರೋ ಮಾಹಿತಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸುತ್ತಿದ್ದಾರೆ. ಈ ಸ್ಪೋಟದಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಪತ್ರಕಾಳಿ ಅಮ್ಮನ್ ಲಾರಿ ಸರ್ವೀಸ್ ಗೋಡೌನ್ ನಲ್ಲಿ ಸ್ಫೊಟ ಸಂಭವಿಸಿದೆ. ಸ್ಫೋಟಕ್ಕೆ ಗೋಡೌನ್ ಬಳಿ ನಿಲ್ಲಿಸಿದ್ದ 15 ಕ್ಕೂ ಹೆಚ್ಚು ಬೈಕ್ ಗಳು ಛಿದ್ರವಾಗಿವೆ. ಸ್ಫೋಟದಲ್ಲಿ ಅಸ್ಲಮ್, ಫಯಾಜ್, ಮನೋಹರ್ ಸಾವನ್ನಪ್ಪಿದ್ದರೆ ನಾಲ್ವರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಇನ್ನೂ ಈ ಬಗ್ಗೆ ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ಮಾಹಿತಿ ನೀಡಿದ್ದು, ಒಂದು ಬಾಕ್ಸ್ ಬಿಟ್ಟರೆ ಬೇರೆ ಬಾಕ್ಸ್ ಗಳಲ್ಲಿರುವ ಪಟಾಕಿ ಸಿಡಿದಿಲ್ಲ, FSL ತಂಡ ಪರಿಶೀಲನೆ ಮಾಡಿದ ನಂತರ ಸ್ಫೋಟಕ್ಕೆ ನಿಖರ ಕಾರಣ ಗೊತ್ತಾಗುತ್ತದೆ. ಲಾರಿ ಪಂಕ್ಚರ್ ಶಾಪ್ ಪಕ್ಕದಲ್ಲೇ ಪಟಾಕಿ ಗೋಡೌನ್ ಇತ್ತು, 60 ಪಟಾಕಿ ಬಾಕ್ಸ್ಗಳು ಸದ್ಯ ಕಾಣಿಸುತ್ತಿವೆ, ಇದರಲ್ಲಿ ಒಂದೆರಡು ಪಟಾಕಿ ಬಾಕ್ಸ್ ಮಾತ್ರ ಸಿಡಿದಿದೆ..? ಟ್ರಾನ್ಸ್ಪೋರ್ಟ್ ಗೋದಾಮಿನಲ್ಲಿ ಪಟಾಕಿ ಸಂಗ್ರಹ ಮಾಹಿತಿ ಇದೆ. ಈ ಪಟಾಕಿಯನ್ನು ಹೇಗೆ ತಂದ್ರು… ಪರ್ಮಿಷನ್ ಇತ್ತಾ ಎಂಬ ಕುರಿತು ಪರಿಶೀಲಿಸುತ್ತೇವೆ ಎಂದು ಡಿಸಿಪಿ ಹರೀಶ್ ಪಾಂಡೆ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ