ಕುವೈತ್ ಸಿಟಿ :ಭಾರತದಲ್ಲಿ ಮುಸ್ಲಿಮರ ಮೇಲೆ ಮರುಕಳಿಸುತ್ತಿರುವ ದೌರ್ಜನ್ಯಗಳ ವಿರುದ್ಧ ಕುವೈತ್ ಸಂಸದರು ಜಂಟಿ ಹೇಳಿಕೆಯನ್ನು ನೀಡಿದ್ದಾರೆ. ಅಸ್ಸಾಂನಲ್ಲಿನ ಹಿಂಸಾಚಾರದ ಹಿನ್ನೆಲೆಯಲ್ಲಿ ಈ ಹೇಳಿಕೆ ಬಂದಿದ್ದು, ಅಂತರಾಷ್ಟ್ರೀಯ ಸಮುದಾಯ ಮಧ್ಯಪ್ರವೇಶಿಸುವಂತೆ ಹೇಳಿಕೆಯಲ್ಲಿ ಕರೆ ನೀಡಲಾಗಿದೆ.
ಮುಸ್ಲಿಮರನ್ನು ಕೊಲ್ಲುವುದು ಮತ್ತು ತಮ್ಮ ಮನೆಗಳಿಂದ ಹೊರಹಾಕುವುದು ಭಾರತದಲ್ಲಿ ಪುನರಾವರ್ತನೆಯಾಗುತ್ತಿದೆ. ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು ಮತ್ತು ಇದನ್ನು ಕೊನೆಗೊಳಿಸಬೇಕು. ಭಾರತೀಯ ಮುಸ್ಲಿಮರು ತಮ್ಮ ದೇಶದಲ್ಲಿ ಶಾಂತಿಯಿಂದ ಬದುಕುವ ಹಕ್ಕನ್ನು ಹೊಂದಿದ್ದಾರೆ.ಅದನ್ನು ನಿರಾಕರಿಸುವ ರೀತಿಯಲ್ಲಿ ನಡೆಸುವ ಸಂಘಟಿತ ಹಿಂಸೆಯನ್ನು ಯುದ್ಧ ಅಪರಾಧವೆಂದು ಪರಿಗಣಿಸಿ ಅಂತರಾಷ್ಟ್ರೀಯ ಸಮುದಾಯವು ಮಧ್ಯೆ ಪ್ರವೇಶಿಸಬೇಕು.
ಹಿಂದುತ್ವ ಶಕ್ತಿಗಳ ದಾಳಿಯನ್ನು ಭಾರತೀಯ ಸರ್ಕಾರ ಖಂಡಿಸುವುದಿಲ್ಲ ಮತ್ತು ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.ಕುವೈತ್ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಕುರಿತು ಹೇಳಿಕೆ ನೀಡಬೇಕು ಎಂದು ಸಂಸದರು ಆಗ್ರಹಿಸಿದ್ದಾರೆ.
ಅವ್ಖಾಫ್ ಸಚಿವಾಲಯವು ಸಂತ್ರಸ್ತರಿಗಾಗಿ ಪ್ರಾರ್ಥಿಸುವಂತೆ ಇಮಾಮ್ಗಳಿಗೆ ನಿರ್ದೇಶನ ನೀಡಬೇಕು. ಮುಸ್ಲಿಂ ಬಾಂಧವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ಮತ್ತು ಇಸ್ಲಾಮಿಕ್ ಸಂಸ್ಥೆಗಳು ಮಧ್ಯಪ್ರವೇಶಿಸಬೇಕು ಎಂದು ಸಂಸದರು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ