ನವದೆಹಲಿ,ಅ.10: “ಜಾರಿ ನಿರ್ದೇಶನಾಲಯ ED Enforcement Department ಅಧಿಕಾರಿಗಳು ನನ್ನನ್ನು ಬಂಧಿಸಿದ್ದಾರೆ ಎಂಬ ಸುದ್ದಿ ನಿಜವಲ್ಲ. ಆಸ್ತಿ ಸಂಪಾದನೆ ಕುರಿತು ವಿಚಾರಣೆಗೆ ಕರೆದಿದ್ದರು, ಇದೀಗ ವಿಚಾರಣೆ ಮುಗಿಸಿ ತೆರಳಿದ್ದೇನೆ. ನನ್ನನ್ನು ಬಂಧಿಸಿಲ್ಲ” ಎಂದು ಮಾಜಿ ಸಚಿವ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಐಎಂಎ ಹಗರಣ ಬೆಳಕಿಗೆ ಬಂದಾಗಿನಿಂದಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಮೀರ್ ಅಹ್ಮದ್ ಅವರ ಆಸ್ತಿ ಗಳಿಕೆ, ಅಕ್ರಮ ಆಸ್ತಿ ಮತ್ತು ಹಣದ ವ್ಯವಹಾರದ ಬಗ್ಗೆ ವಿಚಾರಣೆ ನಡೆಸುತ್ತಲೇ ಇದ್ದಾರೆ. ಇದೀಗ ಇಡಿ (ED) ಅಧಿಕಾರಿಗಳು ಕಳೆದ 3 ದಿನಗಳಿಂದ ಜಮೀರ್ ಅಹಮದ್ ಗೆ ನಿರಂತರ ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿದಿನವೂ ಇಡಿ ಕಚೇರಿಗೆ ಬಂದು ವಿಚಾರಣೆ ಎದುರಿಸುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.
ಆದರೆ, ಈ ಬಗ್ಗೆ ದೆಹಲಿಯಲ್ಲಿ ಸ್ಪಷ್ಟನೆ ನೀಡಿರುವ ಜಮೀರ್ ಅಹ್ಮದ್, “ಇಡಿ ಬಂಧನ ಅನ್ನೊದು ನಿಜವಲ್ಲ. ಒಂದು ಬಾರಿ ಮಾತ್ರ ವಿಚಾರಣೆಗೆ ಕರೆದಿದ್ದರು. ಇಡಿ ಅಧಿಕಾರಿಗಳು ಕೆಲ ಮಾಹಿತಿ ಕೇಳಿದ್ದರು. ಈಗಾಗಲೇ ಇಡಿ ಕೇಳಿರುವ ಎಲ್ಲಾ ಮಾಹಿತಿಯನ್ನೂ ಕೊಟ್ಟಿದ್ದೇನೆ. ನನ್ನನ್ನು ಅರ್ಧ ಗಂಟೆ ಮಾತ್ರ ಮಾತನಾಡಿಸಿದರು. ಅರೆಸ್ಟ್ ಮಾಡುವುದಾಗಿದ್ದರೆ ಅರ್ಧ ಗಂಟೆಯಲ್ಲೆ ವಿಚಾರಣೆ ಮುಗಿಯುತ್ತಿರಲಿಲ್ಲ. ಇಡಿ ಬಂಧನ ಎಂಬುದು ಸುಳ್ಳು ಸುದ್ದಿ. ಮತ್ತೆ ವಿಚಾರಣೆಗೆ ಬರುವಂತೆ ನನ್ನನ್ನು ಕರೆದಿಲ್ಲ. ಸೋಮವಾರ ನಾನು ಬೆಂಗಳೂರಿಗೆ ಹೋಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ.
ಶಾಸಕ ಜಮೀರ್ ಅಹಮದ್ ಇಡಿ ಸೂಚನೆ ಮೇರೆಗೆ ವಿಚಾರಣೆ ಎದುರಿಸುತ್ತಿದ್ದಾರೆ. ದೆಹಲಿಯ ಖಾನ್ ಮಾರ್ಕೆಟ್ ಸಮೀಪವಿರುವ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದ್ದು, ಈಗಾಗಲೇ ತಮ್ಮ ಆಸ್ತಿ ಸಂಪಾದನೆ ಬಗ್ಗೆ ಜಮೀರ್ ಅಹ್ಮದ್ ಇಡಿ ಅಧಿಕಾರಿಗಳಿಗೆ ಎಲ್ಲಾ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು