ದುಬೈ: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಮಿತಿ ಆಶ್ರಯದಲ್ಲಿ “ಶಾಂತಿ ವಾಹಕರೇ (ಸ) ತಾವು ಅಮರರು” ಎಂಬ ಶೀರ್ಷಿಕೆಯಲ್ಲಿ ಬೃಹತ್ ಮೀಲಾದ್ ಸಮಾವೇಶ ದುಬೈ ದೇರಾದಲ್ಲಿರುವ ಪರ್ಲ್ ಕ್ರೀಕ್ ಹೋಟೆಲ್ ನಲ್ಲಿ ಅಕ್ಟೊಬರ್ 15 ರಂದು ಶುಕ್ರವಾರ ಸಂಜೆ 6 ಘಂಟೆಗೆ ನಡೆಯಲಿದೆ.
ಪ್ರಮುಖ ಆತ್ಮೀಯ ಸುಪೀವರ್ಯರೂ, ಶಿಕ್ಷಣ ತಜ್ಞರೂ ಆದ ಬದ್ರುಸ್ಸಾದಾತ್ ಸಯ್ಯದ್ ಖಲೀಲುಲ್ ಬುಖಾರಿ ತಂಙ್ಞಳ್ (ಪ್ರಧಾನ ಕಾರ್ಯದರ್ಶಿ, ಕೇರಳ ಮುಸ್ಲಿಂ ಜಮಾಅತ್ ) ರವರು ದುಆ ನೇತೃತ್ವವನ್ನು ನೀಡಲಿದ್ದು, ಯುವ ವಾಗ್ಮಿ, ಎಸ್ಸೆಸ್ಸೆಫ್ ಕೊಡಗು ಜಿಲ್ಲಾ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಸೋಮವಾರಪೇಟೆ ಮುಖ್ಯ ಭಾಷಣ ಮಾಡಲಿದ್ದಾರೆ.
ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (KSWA) ಯುಎಇ ಸಮಿತಿ ಅಧ್ಯಕ್ಷರಾದ ಅಬೂಬಕರ್ ಹಾಜಿ ಕೊಟ್ಟಮುಡಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ, ಪ್ರಮುಖ ಸಮಾಜ ಸೇವಕರೂ ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಕುಂಜಿಲ, ಉದ್ಯಮಿಗಳಾದ ನೆಲ್ಲರ ಗ್ರೂಪ್ ಛೇರ್ಮನ್ ಶಂಸುದ್ದೀನ್ ನೆಲ್ಲರ, ಕೆಸಿಎಫ್ ಯುಎಇ ಅಧ್ಯಕ್ಷರಾದ ಜಲೀಲ್ ನಿಝಾಮಿ ಎಮ್ಮೆಮಾಡು, ಆಬಿದ್ ಕಂಡಕ್ಕರೆ (ಪ್ರಧಾನ ಕಾರ್ಯದರ್ಶಿ, ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸೌದಿ ಅರೇಬಿಯಾ), ಶಾಮ್ ಅಹ್ಮದ್ ನಾಪೋಕ್ಲು, ಮುಝಮ್ಮಿಲ್ ಪಾಲಿಬೆಟ್ಟ, ಝಮೀರ್ ಬೆಂಗಳೂರು ಸೇರಿದಂತೆ ಹಲವಾರು ಉಲಮಾ ಉಮರಾ ನಾಯಕರುಗಳು, ಯುಎಇ ಯಾ ಪ್ರಮುಖ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡಗಿನ 400ರಷ್ಟು ಜನರು ಪಾಲ್ಗೊಳ್ಳಲಿದ್ದು, ಹುಬ್ಬುರ್ರಸೂಲ್ ಭಾಷಣ, ಪ್ರಾರ್ಥನಾ ಸಂಗಮ, ಅಭಿನಂದನಾ ಸಮಾರಂಭ, ಮೌಲೂದ್ ಪಾರಾಯಣ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳು ನಡೆಯಲಿದ್ದು ಯುಎಇ ಯಲ್ಲಿರುವ ಎಲ್ಲಾ ಅನಿವಾಸಿಗಳು ಭಾಗವಹಿಸಿ ಸಹಕರಿಸಬೇಕಾಗಿ ಮೀಲಾದ್ ಸ್ವಾಗತ ಸಮಿತಿ ಛೇರ್ಮನ್ ಉಸ್ಮಾನ್ ಹಾಜಿ ನಾಪೋಕ್ಲು ಹಾಗೂ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮೂರ್ನಾಡು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ