ಅಬುಧಾಬಿ:ಲೋಕಾನುಗ್ರಹಿ ಪ್ರವಾದಿ ಮುಹಮ್ಮದ್ (ಸ) ರ ಜನ್ಮದಿನಾಚರಣೆಯ ಅಂಗವಾಗಿ ಅಕ್ಟೋಬರ್ 21 ರ ಗುರುವಾರದಂದು ಸಾರ್ವಜನಿಕ ರಜಾದಿನವಾಗಿದೆ ಎಂದು ಯುಎಇ ಮಾನವ ಸಂಪನ್ಮೂಲ ಸಚಿವಾಲಯವು ಘೋಷಿಸಿದೆ.
ಇಸ್ಲಾಮಿಕ್ ಕ್ಯಾಲೆಂಡರ್ನ ಮೂರನೇ ತಿಂಗಳಾದ,ರಬೀಉಲ್ ಅವ್ವಲ್,12 ನೇ ದಿನ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವಾಗಿದೆ. ಪ್ರವಾದಿ ಮುಹಮ್ಮದ್ (ಸ) ರವರ ಜನ್ಮದಿನವನ್ನು ಆಚರಿಸಲು ಗಲ್ಫ್ ರಾಜ್ಯಗಳು ಸೇರಿದಂತೆ 12 ಇಸ್ಲಾಮಿಕ್ ದೇಶಗಳಲ್ಲಿ ರಬೀವುಲ್ ಅವ್ವಲ್ 12 ರಂದು ರಜಾದಿನವನ್ನಾಗಿ ಘೋಷಿಸಿದೆ.
ಯುಎಇಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯಗಳ ರಜಾದಿನಗಳನ್ನು ಸಂಯೋಜಿಸಿರುವ ಹಿನ್ನೆಲೆಯಲ್ಲಿ ಖಾಸಗಿ ವಲಯದಲ್ಲೂ ಅಕ್ಟೋಬರ್ 21 ರಿಂದ ದೀರ್ಘ ವಾರಾಂತ್ಯ ಲಭಿಸಲಿದೆ.ಅಕ್ಟೋಬರ್ 21 ರ ಗುರುವಾರದಿಂದ ಅಕ್ಟೋಬರ್ 23 ರ ಶನಿವಾರದವರೆಗೆ ಸತತ ಮೂರು ರಜಾದಿನಗಳಿರುತ್ತದೆ.
ಆದರೆ ಖಾಸಗಿ ವಲಯದಲ್ಲಿ ರಜಾದಿನಗಳನ್ನು ಮಾನವ ಸಂಪನ್ಮೂಲ ಸಚಿವಾಲಯ ದೃಢ ಪಡಿಸಬೇಕಾಗಿದೆ.
ಕುವೈತ್ನಲ್ಲಿ ಪ್ರವಾದಿ ಜನ್ಮದಿನಾಚರಣೆಯ ರಜೆಯು ಅಕ್ಟೋಬರ್ 21 ಗುರುವಾರ. ಈ ನಿಟ್ಟಿನಲ್ಲಿ ನಾಗರಿಕ ಸೇವಾ ಆಯೋಗದ ಶಿಫಾರಸಿಗೆ ಸಂಪುಟ ಅನುಮೋದನೆ ನೀಡಿದೆ. ಈ ತಿಂಗಳ 18 ರಂದು ರಜೆ ಬರಬೇಕಿತ್ತು. ಇದನ್ನು ಅಕ್ಟೋಬರ್ 21 ಗುರುವಾರಕ್ಕೆ ಮುಂದೂಡಲಾಯಿತು.
ಶುಕ್ರವಾರ, ಶನಿವಾರಗಳ ವಾರಾಂತ್ಯದ ರಜಾದಿನಗಳು ಸೇರಿದಂತೆ ಸತತ ಮೂರು ದಿನಗಳ ರಜೆ ಲಭಿಸಲಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ