ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.
ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತೆ, ಭಾವನೆಗಳಿಗೆ ದಕ್ಕೆಯಾದಾಗ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತದೆ ಎಂಬ ಹೇಳಿಕೆಯು ತೀರಾ ಖಂಡನೀಯವಾಗಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಳ್ಳಲಿದೆ ಎಂದು CPIM ತೀವ್ರ ಆತಂಕ ವ್ಯಕ್ತಪಡಿಸಿದೆ.
ಬಿಜೆಪಿ ಸಂಘಪರಿವಾರ ತನ್ನ ಗುಪ್ತ ಅಜೆಂಡಾಗಳನ್ನು ಬಹಳ ವ್ಯವಸ್ಥಿತವಾಗಿ ಜಾರಿಗೊಳಿಸುತ್ತಿದ್ದು, ಶಿಕ್ಷಣ, ಉದ್ಯೋಗ,ಆರೋಗ್ಯ ಸೇರಿದಂತೆ ಜನರ ಬದುಕಿನ ವಿಚಾರಗಳನ್ನು ಬದಿಗೆ ಸರಿಸಿ ಕೇವಲ ಹಿಂದುತ್ವದ ಅಮಲನ್ನು ಯುವಜನತೆಯ ತಲೆಗೇರಿಸಿ ಕೋಮುದ್ವೇಷದಿಂದಲೇ ಜಿಲ್ಲೆಯ ರಾಜಕಾರಣವನ್ನು ನಿಯಂತ್ರಿಸುತ್ತಿದೆ.
ಇದರಿಂದಾಗಿ ಪುಂಡಪೋಕರಿಗಳು ಕಾನೂನನ್ನು ಕೈಗೆತ್ತಿ ಅಮಾಯಕರ ಮೇಲೆ ದಾಳಿ ನಡೆಸುವ ಮೂಲಕ ಸಂಘಪರಿವಾರ ತನ್ನ ತಾಲಿಬಾನ್ ಸಂಸ್ಕ್ರತಿಯನ್ನು ಪ್ರದರ್ಶಿಸುತ್ತಿದೆ.ಇದನ್ನು ಕೂಡಲೇ ಮಟ್ಟ ಹಾಕಲು ಜಿಲ್ಲೆಯ ಪೋಲಿಸ್ ಇಲಾಖೆ ಹಾಗೂ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು CPIM ಮಂಗಳೂರು ನಗರ ದಕ್ಷಿಣ ಸಮಿತಿಯು ಒತ್ತಾಯಿಸಿದೆ.
ಸುನಿಲ್ ಕುಮಾರ್ ಬಜಾಲ್
CPIM ಮಂಗಳೂರು ನಗರ ದಕ್ಷಿಣ ಸಮಿತಿ
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ