janadhvani

Kannada Online News Paper

ಡಾ.ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು-ಚೇತರಿಕೆಗೆ ಪ್ರಧಾನಿ ಶುಭ ಹಾರೈಕೆ

ಜ್ವರದಿಂದ ಬಳಲುತ್ತಿರುವ ಸಿಂಗ್ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನವದೆಹಲಿ,ಅ. 14: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಏಮ್ಸ್ ಗೆ ದಾಖಲಿಸಲಾಗಿದೆ.

ಸಿಂಗ್ ಅವರು ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನ ಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಡಾ. ಮನಮೋಹನ್ ಸಿಂಗ್ ಬೇಗ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಜ್ವರದಿಂದ ಬಳಲುತ್ತಿರುವ ಸಿಂಗ್ ಅವರು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗುವಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳ ಮೂಲಕ ಶುಭ ಹಾರೈಸುತ್ತಿದ್ದಾರೆ.