ಸಾಗರ: ಮನೆಯ ಸದಸ್ಯರು ಮತಾಂತರವಾಗುತ್ತಿದ್ದಾರೆ ಎಂದು ಆರೋಪಿಸಿ, ಸ್ಥಳೀಯರು ಮತ್ತು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಮನೆ ಮುಂದೆ ಜಮಾಯಿಸಿದ್ದು, ಇದರಿಂದ ಕೆಲ ಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಲ್ಲಿನ ಗೋಪಾಲಗೌಡ ನಗರ ಬಡಾವಣೆಯಲ್ಲಿ ಮಹಿಳೆಯೊಬ್ಬರನ್ನು ಮತಾಂತರ ಮಾಡಲಾಗಿದೆ ಎಂಬ ಅನುಮಾನದ ಕಾರಣ ಅವರ ಮನೆಯ ಮುಂದೆ ಜನರ ಗುಂಪು ಜಮಾವಣೆಯಾಗಿತ್ತು.
ಮನೆಯವರು ಶಿಲುಬೆ ಧರಿಸಿ, ಮರಿಯಾ ಮಾತೆಯ ಪೂಜೆ ಮಾಡುತ್ತಿದ್ದಾರೆ. ಮೆಷಿನರಿಗಳು ಹಣದಾಸೆಗೆ ಹಿಂದೂಗಳ ಮತಾಂತರ ಮಾಡುತ್ತಿದ್ದಾವೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆರೋಪಿಸಿದರು. ಗೋಪಾಲಗೌಡ ನಗರದಲ್ಲಿ ಕೆಲಕಾಲ ಗೊಂದಲ ಉಂಟಾಗಿತ್ತು.
ಮಹಿಳೆಯೊಬ್ಬರು ತನ್ನ ಗಂಡ ಕುಡಿಯುವುದನ್ನು ಬಿಟ್ಟರೆ ಮೇರಿ ಮಾತೆಯ ಪ್ರತಿಮೆ ತಂದು ಪೂಜಿಸುವುದಾಗಿ ಹರಕೆ ಹೊತ್ತಿದ್ದರು ಎನ್ನಲಾಗಿದೆ. ಹೀಗಾಗಿ ಭಾನುವಾರ ಅವರು ಮೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಿದ್ದರು.
ಇದು ಮತಾಂತರವಾಗಿದೆ ಎಂಬ ಗೊಂದಲಕ್ಕೆ ಕಾರಣವಾಗಿತ್ತು. ಬಳಿಕ ಯಾವುದೇ ರೀತಿಯ ಮತಾಂತರ ನಡೆದಿಲ್ಲ ಎಂಬ ವಿಷಯ ಗೊತ್ತಾಗಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು