ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಾಲ್ಗಳು, ಚಿತ್ರಮಂದಿರ ಪ್ರವೇಶಿಸಲು ಕೋವಿಡ್ -19 ಲಸಿಕೆ ಪಡೆದಿರುವ ಪ್ರಮಾಣ ಪತ್ರಗಳನ್ನು ಕಡ್ಡಾಯಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಈ ಕುರಿತು ಮಾತನಾಡಿದ್ದಾರೆ.
“ಸಾಂಕ್ರಾಮಿಕ ಪರಿಸ್ಥಿತಿ ಹದಗೆಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರದಿಂದ ಹೆಚ್ಚುವರಿ ಕಣ್ಗಾವಲು ಕ್ರಮ ಕೈಗೊಳ್ಳಲಾಗುವುದು. ಮಲ್ಟಿಪ್ಲೆಕ್ಸ್ಗಳು, ಚಿತ್ರಮಂದಿರಗಳು ಮತ್ತು ಥಿಯೇಟರ್ಗಳು ಶೇ 100 ಪ್ರತಿಶತ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದ್ದರೂ, ಲಸಿಕೆಯ ಎರಡು ಡೋಸ್ಗಳನ್ನು ಪಡೆದವರನ್ನು ಮಾತ್ರ ಒಳಗೆ ಬಿಡಲಾಗುತ್ತದೆ. ಎರಡು ಡೋಸ್ಗಳನ್ನು ಪಡೆದಿರುವ ಪ್ರಮಾಣ ಪತ್ರವನ್ನು ಒದಗಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿಸಲಾಗುವುದು” ಎಂದು ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆ ಲಸಿಕೆ ಪಡೆಯದೇ ಇರುವವರನ್ನು ಗುರುತಿಸಲು ವಿಶೇಷ ತಂಡಗಳನ್ನು ರಚನೆ ಮಾಡಿದೆ. ನಗರದಲ್ಲಿ ವಿಶೇಷ ಲಸಿಕಾ ಅಭಿಯಾನಗಳನ್ನು ನಡೆಸಲಾಗುತ್ತಿದೆ. ಈ ವೇಳೆಯೂ ಲಸಿಕೆ ಹಾಕಿಸಿಕೊಳ್ಳದ ಜನರ ಪಟ್ಟಿಯನ್ನು ಮಾಡಲಾಗುವುದು. ಇದರೊಂದಿಗೆ ನಗರದಲ್ಲಿ ಅರ್ಹ ಜನಸಂಖ್ಯೆಗೆ ಆದಷ್ಟು ಬೇಗ ಲಸಿಕೆ ಹಾಕಲು ಸಹಾಯಕವಾಗುತ್ತದೆ ಎಂದು ಅಧಿಕಾರಿಗಳು ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ