ಮಂಗಳೂರು,ಅ.18: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಈದ್ ಮಿಲಾದ್ ಅನ್ನು ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.
ಜಿಲ್ಲೆಯಾದ್ಯಂತ ಆಚರಿಸಲಿರುವ ಈದ್ ಮಿಲಾದ್ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಲಾಗಿದೆ.
- ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ ಸಾಂಸ್ಕೃತಿಕ ಕಾರ್ಯಕ್ರಮ/ ಸಭೆ/ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ.
- ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಸುರಕ್ಷಿತ ಅಂತರ ಹಾಗೂ ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದು.
- ಒಂದು ವೇಳೆ ಹೆಚ್ಚು ಜನ ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಬಹುದು .
- ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ.
- ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು.
- 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಆಚರಿಸಬಹುದಾಗಿದೆ.
- ಮಸೀದಿಗಳಲ್ಲಿ ನಮಾಝ್ ನಿರ್ವಹಿಸುವವರ ಮಧ್ಯ ಕನಿಷ್ಠ ಆರು ಅಡಿ ಅಂತರ ಇರಬೇಕು.
- ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡಬೇಕು.
- ಮಸೀದಿಯಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ಮನೆಗಳಿಂದ ಮುಸಲ್ಲಾವನ್ನು ಕಡ್ಡಾಯವಾಗಿ ತರಬೇಕು.
- ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ.
ಮಸೀದಿಗಳನ್ನು ಹೊರತುಪಡಿಸಿ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್ ನಲ್ಲಿ ಈದ್ ಮಿಲಾದ್ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ/ ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?