ರಿಯಾದ್ : ಸೌದಿ ಅರೇಬಿಯಾದ ಎರಡು ಹರಂ ಮಸೀದಿಗಳನ್ನು ಹೊರತುಪಡಿಸಿ ಇತರ ಮಸೀದಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ನಿರ್ದೇಶನ ನೀಡಿದೆ.
ವ್ಯಾಪಕ ಸೌಲಭ್ಯಗಳು ಮತ್ತು ಅತ್ಯಾಧುನಿಕ ಭದ್ರತಾ ತಪಾಸಣೆಗಳು ಜಾರಿಯಲ್ಲಿರುವುದರಿಂದ ಎರಡು ಹರಂ ಮಸೀದಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಅಗತ್ಯವಿಲ್ಲ ಎಂದು ಸಚಿವಾಲಯ ಹೇಳಿದೆ. ಗೃಹ ಸಚಿವಾಲಯ ಘೋಷಿಸಿದ ಕೋವಿಡ್ ವಿನಾಯಿತಿಗಳನ್ನು ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯದ ಪ್ರಸ್ತಾವನೆಯು ಸ್ಪಷ್ಟಪಡಿಸಿದೆ.
ತವಕ್ಕಲ್ನಾ ಆ್ಯಪ್ನ್ನು ಪರಿಶೀಲಿಸದಿರುವಲ್ಲಿ ಸಾಮಾಜಿಕ ಅಂತರ ಮತ್ತು ಇತರ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಗೃಹ ಸಚಿವಾಲಯ ಎಚ್ಚರಿಸಿದೆ. ಇದರ ಆಧಾರದ ಮೇಲೆ, ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ಮಸೀದಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಮತ್ತು ಮಾಸ್ಕ್ ಧರಿಸುವುದನ್ನು ಮುಂದುವರಿಸಲು ನಿರ್ದೇಶಿಸಿದೆ.
ಈ ಪ್ರಸ್ತಾಪವು ಎಲ್ಲಾ ವಯಸ್ಸಿನ ಜನರ ಸುರಕ್ಷತೆ ಮತ್ತು ಮಸೀದಿಗೆ ಭೇಟಿ ನೀಡುವವರ ಆರೋಗ್ಯ ಸಮಸ್ಯೆಗಳನ್ನು ಆಧರಿಸಿದೆ. ಆದಾಗ್ಯೂ, ಗೃಹ ಸಚಿವಾಲಯವು ಘೋಷಿಸಿದ ವಿನಾಯಿತಿಗಳು ಮಕ್ಕಾ ಮತ್ತು ಮದೀನಾದ ಪವಿತ್ರ ಹರಮ್ಗಳಿಗೆ ಅನ್ವಯಿಸುತ್ತದೆ. ಈ ಸ್ಥಳಗಳಲ್ಲಿ ಲಭ್ಯವಿರುವ ವ್ಯಾಪಕ ಸೌಲಭ್ಯಗಳು ಮತ್ತು ಸಂದರ್ಶಕರ ಮೇಲೆ ಕಟ್ಟುನಿಟ್ಟಾದ ಭದ್ರತಾ ತಪಾಸಣೆಯು ವಿನಾಯಿತಿಗೆ ಪೂರಕವಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ