ಹಾಸನ: ನಗರದಲ್ಲಿ ಬೀದಿನಾಯಿಗಳ ಹಾವಳಿಗೆ ಸಾರ್ವಜನಿಕರು ಹೈರಾಣಾಗಿದ್ದು, ಅರ್ಧಗಂಟೆಯಲ್ಲಿ 15 ಜನರಿಗೆ ಕಚ್ಚಿ ಗಾಯಗೊಳಿಸಿವೆ. ಇಂದು ಹುಚ್ಚುನಾಯಿಯೊಂದು ದಾರಿಹೋಕರ ಮೇಲೆ ದಾಳಿ ನಡೆಸಿ, ಸಿಕ್ಕಸಿಕ್ಕವರನ್ನು ಮನಬಂದಂತೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ.
ಮನೆಯ ಮುಂದೆ ನಿಂತಿದ್ದ ಮೂರು ವರ್ಷದ ಪುಟ್ಟ ಮಗುವಿನ ಮೇಲೆ ಎರಗಿದ ಹುಚ್ಚುನಾಯಿ ನಾಲ್ಕು ಹಲ್ಲುಗಳನ್ನು ಕಚ್ಚಿ ಕಿತ್ತುಹಾಕಿದೆ. ಇಷ್ಟಕ್ಕೆ ಸುಮ್ಮನಾಗದೆ ಗದ್ದವನ್ನು ಕಚ್ಚಿದೆ. ಮಗುವಿನ ಪೋಷಕರು ಓಡಿ ಬಂದಿದ್ದರಿಂದ ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ನಂತರ ವಾಕಿಂಗ್ ತೆರಳುತ್ತಿದ್ದ ತ್ರೀಪಾಠಿ ಎಂಬ ವೈದ್ಯರ ಮೇಲೂ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದೆ. ಹೀಗೆ ಹದಿನೈದು ಮಂದಿ ಮೇಲೆ ದಾಳಿ ಮಾಡಿರುವ ಹುಚ್ಚು ಶ್ವಾನ ಹಣೆ, ಮುಖ, ಬೆನ್ನು, ಅಂಗೈ, ಕಾಲು, ತೊಡೆ ಇತರ ಭಾಗಗಳಿಗೆ ಕಚ್ಚಿದ್ದು ತೀವ್ರ ಸ್ವರೂಪದ ಗಾಯಗಳಾಗಿವೆ. ನಾಯಿ ದಾಳಿಗೊಳಗಾದವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಬೀದಿನಾಯಿಗಳ ಹಾವಳಿ ಇದೇ ಮೊದಲೇನಲ್ಲಾ. ಪದೇ ಪದೇ ಮನೆಯ ಮುಂದೆ ಆಟವಾಡುತ್ತಿರುವ ಮಕ್ಕಳು, ಮುಂಜಾನೆ, ಸಂಜೆ ವೇಳೆ ವಾಕಿಂಗ್ ಹೋಗುತ್ತಿರುವವರ ಮೇಲೂ ದಾಳಿ ಮಾಡಿವೆ. ಬೀದಿನಾಯಿಗಳ ಉಪಟಳಕ್ಕೆ ಕಡಿವಾಣ ಹಾಕಿ ಎಂದು ನಗರಸಭೆ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೂ ತಂದರೂ ಯಾರೂ ಕೂಡ ಇತ್ತ ಗಮನಹರಿಸಿಲ್ಲ. ಇವರ ಬೇಜವಾಬ್ದಾರಿಯಿಂದಲೇ ಇಂತಹ ಘಟನೆಗಳು ಮರುಕಳುಸುತ್ತಿವೆ ಎಂದು ಅಧಿಕಾರಿಗಳಿಗೆ ನಗರವಾಸಿಗಳು ಹಿಡಿಶಾಪ ಹಾಕುತ್ತಿದ್ದಾರೆ.
ಹಾಸನ ನಗರವೊಂದರಲ್ಲೇ ಸುಮಾರು ಮೂರರಿಂದ ನಾಲ್ಕು ಸಾವಿರ ನಾಯಿಗಳಿವೆ. ಕೋಳಿ, ಮಾಂಸ, ನಾನ್ ವೆಜ್ ಹೋಟೆಲ್ ನವರು ಜನನಿಬಿಡ ಪ್ರದೇಶದಲ್ಲೇ ತ್ಯಾಜ್ಯವನ್ನು ಬಿಸಾಡುತ್ತಿದ್ದಾರೆ. ಇದರ ಜೊತೆಗೆ ಜನರು ಕೂಡ ಕಸ ಇತ್ಯಾದಿ ಪದಾರ್ಥಗಳನ್ನು ರಸ್ತೆ ಬದಿಯಲ್ಲಿ ಎಸೆಯುತ್ತಿರುವುದರಿಂದ ನಾಯಿಗಳ ಉಪಟಳ ಹೆಚ್ಚಾಗಿದೆ.
ಈ ಬಗ್ಗೆ ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ನಾಯಿಗಳ ಸಂಖ್ಯೆ ಪ್ರತಿ ವರ್ಷ ಏರಿಕೆಯಾಗುತ್ತಲೆ ಇದೆ.ನಾಯಿಗಳ ಸಂತಾನಹರಣ ಚಿಕಿತ್ಸೆಗೆ ಟೆಂಡರ್ ಕರೆದರೂ ಯಾರೂ ಬಂದಿಲ್ಲ. ಈಗ ತಮಿಳುನಾಡು ಮೂಲದವರು ಬಂದಿದ್ದು ಶೀಘ್ರದಲ್ಲಿಯೇ ನಾಯಿಗಳನ್ನೆಲ್ಲಾ ಹಿಡಿದು ಸಂತಾನಹರಣ ಚಿಕಿತ್ಸೆ ನೀಡಲಾಗುವುದು ಎಂದು ಸಬೂಬು ಹೇಳುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ