ನವದೆಹಲಿ, ಅ.28- ಎನ್ಇಇಟಿ ಫಲಿತಾಂಶವನ್ನು ಪ್ರಕಟಿಸಲು ಅನುಮತಿ ನೀಡುವ ಮೂಲಕ ದೇಶಾದ್ಯಂತ ವೈದ್ಯಕೀಯ ಪದವಿ ಪ್ರವೇಶಕ್ಕಿದ್ದ ಪ್ರಮುಖ ಅಡ್ಡಿಯನ್ನು ಸುಪ್ರೀಂಕೋರ್ಟ್ ನಿವಾರಿಸಿದೆ. 2021-22ನೇ ಸಾಲಿನ ವೈದ್ಯಕೀಯ ಪದವಿ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕಳೆದ ಸೆಪ್ಟಂಬರ್ 12ರಂದು ದೇಶಾದ್ಯಂತ ರಾಷ್ಟ್ರೀಯ ಸಾಮಾನ್ಯ ಅರ್ಹತಾ ಪರೀಕ್ಷೆ (ಎನ್ಇಇಟಿ) ನಡೆಸಿತ್ತು.
202 ನಗರಗಳ 3,682 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 16,14,777 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. 9,588 ಕೇಂದ್ರ ಅಧಿಕ್ಷಕರು, ಉಪ ಅಧಿಕ್ಷಕರು, 5615 ವೀಕ್ಷಕರು ಕೆಲಸ ಮಾಡಿದ್ದರು. 220 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನದಲ್ಲಿ 2,69,378 ಮೌಲ್ಯಮಾಪಕರು ಭಾಗವಹಿಸಿದ್ದರು.
ಪರೀಕ್ಷೆಯ ದಿನದಂದು ಮಹಾರಾಷ್ಟ್ರದ ಕೇಂದ್ರವೊಂದರಲ್ಲಿ ವೈಷ್ಣವಿ ಭೂಪಾಲಿ ಮತ್ತು ಅಭಿಶೇಕ್ ಶಿವಾಜಿ ಎಂಬ ಇಬ್ಬರು ವಿದ್ಯಾರ್ಥಿಗಳ ಒಎಂಆರ್ ಹಾಳೆ ಮತ್ತು ಬುಕ್ಲೆಟ್ ಅದಲು ಬದಲಾಗಿದ್ದವು. ಈ ವಿದ್ಯಾರ್ಥಿಗಳು ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಫಲಿತಾಂಶ ಪ್ರಕಟಿಸಲು ತಡೆಯಾಜ್ಞೆ ನೀಡಿದ್ದಲ್ಲದೆ, ಹೊಸದಾಗಿ ಪರೀಕ್ಷೆ ನಡೆಸುವಂತೆ ಅಕ್ಟೋಬರ್ 20ರಂದು ಆದೇಶಿಸಿತ್ತು.
ಹೈಕೋರ್ಟ್ನ ಆದೇಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿತ್ತು. ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದ್ದರು. ಸುಪ್ರೀಂಕೋರ್ಟ್ ಎಲ್.ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿ.ಆರ್.ಗಾವಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಬಾಂಬೆ ಹೈಕೋರ್ಟ್ನ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಪರೀಕ್ಷಾ ಸಂಸ್ಥೆ ಎನ್ಇಇಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಬೇಕು ಎಂದು ಸೂಚಿಸಿದೆ.
ತಕರಾರು ಅರ್ಜಿ ಸಲ್ಲಿಸಿರುವ ಇಬ್ಬರು ವಿದ್ಯಾರ್ಥಿಗಳ ಕುರಿತಂತೆ ದೀಪಾವಳಿ ರಜೆಯ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಸುಪ್ರೀಕೋರ್ಟ್ ತಿಳಿಸಿದೆ. ಆದಾಗ್ಯೂ ನೋಟಿಸ್ ನೀಡಿ ಕೌಂಟರ್ ದಾಖಲಿಸಲು ಅನುಮತಿ ನೀಡಲಾಗುವುದು. ಇಬ್ಬರು ವಿದ್ಯಾರ್ಥಿಗಳಿಗಾಗಿ 16 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ. ಈ ಮೊಲಕ ನೆನೆಗುದಿಗೆ ಬಿದ್ದಿದ್ದ ವೈದ್ಯಕೀಯ ಪದವಿ ಪ್ರವೇಶ ಪ್ರಕ್ರಿಯೆಗಳಿಗೆ ಚಾಲನೆ ಸಿಕ್ಕಂತಾಗಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)