‘ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಪುತ್ರಿಯ ಮೇಲೆ ಅತ್ಯಾಚಾರ ಎಸಗುವುದಾಗಿ ಬೆದರಿಕೆ ಹಾಕಿರುವ ಘಟನೆ ಅತ್ಯಂತ ನಾಚಿಕೆಗೇಡಿನ ಸಂಗತಿ’ ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್ ಉಲ್ ಹಕ್ ಬೇಸರ ವ್ಯಕ್ತಪಡಿಸಿದ್ದಾರೆ.
ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡ ಹಿನ್ನೆಲೆಯಲ್ಲಿ ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ವಿರಾಟ್ ಕೊಹ್ಲಿ ಅವರ 9 ತಿಂಗಳ ಮಗುವಿಗೆ ಆನ್‌ಲೈನ್‌ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿರುವುದು ವರದಿಯಾಗಿದೆ.
ಅ.24ರಂದು ನಡೆದ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ ಸೋತಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಗುರಿಯಾಗಿಸಿಕೊಂಡು ಟೀಕೆ ಮಾಡಿದ್ದರು.
ಅ.31ರಂದು ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಸೋತಿರುವುದಕ್ಕೆ ನಾಯಕ ವಿರಾಟ್ ಕೊಹ್ಲಿ ಅವರನ್ನು ಗುರಿಯಾಗಿಸಿಕೊಂಡು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳಕಾರಿಯಾದ ಪೋಸ್ಟ್‌ಗಳನ್ನು ಮಾಡುವ ಮೂಲಕ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿಯ ಮಹಿಳಾ ಆಯೋಗ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಎಫ್‌ಐಆರ್, ಕೈಗೊಂಡ ಕ್ರಮ, ಆರೋಪಿಗಳ ವಿವರವನ್ನು ನ.8ರ ಒಳಗೆ ನೀಡುವಂತೆ ಮಹಿಳಾ ಆಯೋಗವು ದೆಹಲಿಯ ಸಹಾಯಕ ಕಮಿಷನರ್ ಅವರಿಗೆ ಸೂಚಿಸಿದೆ.
















ಇನ್ನಷ್ಟು ಸುದ್ದಿಗಳು
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ
ನಕಲಿ ವೆಬ್ಸೈಟ್ಗಳ ವಿರುದ್ಧ ಜಾಗ್ರತೆ- ಸೌದಿ ವಾಣಿಜ್ಯ ಸಚಿವಾಲಯ ಎಚ್ಚರಿಕೆ
ಹಾರ್ಮುಜ್ ಜಲಸಂಧಿ ಸಂಘರ್ಷ: ಇರಾನ್ ಮೇಲೆ ಮತ್ತೆ ಅಮೆರಿಕ ಸೇನೆ ದಾಳಿ
ಇಸ್ರೇಲ್ ಸೈನ್ಯ ಗಾಜಾದಲ್ಲಿ ನಡೆಸಿದ ನರಮೇಧ : ಎರಡು ವರ್ಷಗಳಲ್ಲಿ 20,000 ಮಕ್ಕಳ ಹತ್ಯೆ- ವಿಶ್ವಸಂಸ್ಥೆ ವರದಿ
ಮಕ್ಕಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಧೂಳಿನ ಬಿರುಗಾಳಿ ಮುಂದುವರಿಕೆ- ಹಲವು ಭಾಗಗಳಲ್ಲಿ ಮಳೆ
ಶಾಂತಿ ಮರೀಚಿಕೆ…?: ಲೆಬನಾನ್ನಲ್ಲಿ ದಾಳಿ ತೀವ್ರಗೊಳಿಸಿದ ಇಸ್ರೇಲ್- ಮತ್ತೆ ಹಾರ್ಮುಝ್ ಬಂದ್!
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ