ಬೆಂಗಳೂರು,ನ.17: ಕರ್ನಾಟಕ ರಾಜ್ಯ ವಖ್ಫ್ ಬೋರ್ಡ್ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎನ್ ಕೆ ಎಂ ಶಾಫಿ ಸಅದಿ ಗೆಲುವಿನ ನಗೆ ಬೀರಿದ್ದಾರೆ. ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಬಹುಮತದೊಂದಿಗೆ, ಶಾಫಿ ಸಅದಿಯವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಎರಡು ಬಾರಿ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಶಾಫಿ ಸಅದಿಯವರು ಕರ್ನಾಟಕ ರಾಜ್ಯ ಸರಕಾರದಿಂದ ಕಳೆದ ಎರಡು ಅವಧಿಗೆ ರಾಜ್ಯ ವಕ್ಫ್ ಬೋರ್ಡ್ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದರು.
ಸದ್ಯ ಕರ್ನಾಟಕ ಮುಸ್ಲಿಮ್ ಜಮಾಅತ್ ಇದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಉಲಮಾ(ಮೌಲಾನ) ಒಬ್ಬರು ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದು, ಕರಾವಳಿಗೂ ಇದು ಮೊದಲ ಆಯ್ಕೆಯಾಗಿದೆ.
ವಕ್ಫ್ ಮಂಡಳಿ ಅದ್ಯಕ್ಷರಾಗಿದ್ದ ಮುಹಮ್ಮದ್ ಯೂಸುಫ್ ಅವರ ನಿಧನದ ಬಳಿಕ ತೆರವಾಗಿದ್ದ ಅದ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು.
ಈ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ತನ್ವೀರ್ ಸೇಠ್, ರಾಜ್ಯ ಸಭಾ ಸದಸ್ಯ ನಾಸಿರ್ ಹುಸೇನ್, ಶಾಸಕಿ ಕನೀಝ್ ಫಾತಿಮಾ ಹಾಗೂ ಸದಸ್ಯರಾದ ಅಬ್ದುಲ್ ರಿಯಾಝ್ ಖಾನ್, ಯಾಕೂಬ್ ಇತರರಿದ್ದರು.
ಶಾಫಿ ಸಅದಿ ಆಯ್ಕೆಗೆ ಹರ್ಷ ವ್ಯಕ್ತಪಡಿಸಿದ ಇಂಡಿಯನ್ ಗ್ಯಾಂಡ್ ಮುಫ್ತಿ:
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಖಮರುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರು ತಮ್ಮ ತುರ್ತು ಸಂದೇಶದಲ್ಲಿ ಶಾಫಿ ಸಅದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಝೈನುಲ್ ಉಲಮಾರಿಂದ ಅಭಿನಂದನೆ:
ಸುನ್ನೀ ಜಂಯ್ಯತುಲ್ ಉಲಮಾ ಕರ್ನಾಟಕ ರಾಜ್ಯ ಅಧ್ಯಕ್ಷ, ಉಡುಪಿ, ದ.ಕ.ಚಿಕ್ಕಮಗಳೂರು, ಹಾಸನ ಜಿಲ್ಲೆಯ ಸಂಯುಕ್ತ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಶಾಫಿ ಸಅದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಶಾಫಿ ಸಅದಿಯವರು ಉತ್ತಮ ಆಡಳಿತ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಸಿಎಫ್ ಅಂತಾರಾಷ್ಟ್ರೀಯ ಅಧ್ಯಕ್ಷರಾದ ಹಾಜಿ ಶೇಖ್ ಬಾವ ಅಭಿನಂದನೆ ಸಲ್ಲಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ