ರಿಯಾದ್, ನ.25: ಡಿಸೆಂಬರ್ 1 ರಿಂದ ಭಾರತ ಸೇರಿದಂತೆ ಇತರ 5 ದೇಶಗಳ ಜನರಿಗೆ ನೇರವಾಗಿ ಸೌದಿ ಅರೇಬಿಯಾ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಇವರು ಸೌದಿ ಅರೇಬಿಯಾದಲ್ಲಿ ಐದು ದಿನಗಳ ಸಾಂಸ್ಥಿಕ ಸಂಪರ್ಕತಡೆಯನ್ನು ಪೂರ್ಣಗೊಳಿಸಬೇಕಿದೆ.
ಕೊರೊನಾ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಸೌದಿ ಅರೇಬಿಯಾ ನೇರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು, ಭಾರತದ ಹೊರಗಿನ ದೇಶದಲ್ಲಿ, 14 ದಿನಗಳ ಕ್ವಾರಂಟೈನ್ ಅನ್ನು ಪೂರ್ಣಗೊಳಿಸಿದವರಿಗೆ ಮಾತ್ರ ಪ್ರವೇಶವನ್ನು ಅನುಮತಿಸಲಾಗಿತ್ತು.ದುಬಾರಿ ವೆಚ್ಚದ ಈ ಪ್ರಯಾಣ ಮೊತ್ತವನ್ನು ಭರಿಸಲಾಗದೆ ಲಕ್ಷಾಂತರ ಅನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದರು.
ಭಾರತ ಸಹಿತ ಇಂಡೋನೇಷ್ಯಾ, ಪಾಕಿಸ್ತಾನ, ಬ್ರೆಜಿಲ್, ವಿಯೆಟ್ನಾಂ, ಈಜಿಪ್ಟ್ ನ ಪ್ರಯಾಣಿಕರಿಗೂ ಸೌದಿ ಅರೇಬಿಯಾಕೆ ನೇರ ಪ್ರವೇಶವನ್ನು ಅನುಮತಿಸಲಾಗಿದೆ.
ಈ ಬಗ್ಗೆ ಸೌದಿ ಅರೇಬಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸ್ಪಷ್ಟಪಡಿಸಿದೆ.ಈ ಮಹತ್ವದ ನಿರ್ಧಾರದಿಂದ ಲಕ್ಷಾಂತರ ಅನಿವಾಸಿಗಳು ನಿಟ್ಟುಸಿರು ಬಿಡುವಂತಾಗಿದೆ.

















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ