ಅಯೋಧ್ಯೆ: ಕಾಲೇಜು ಪ್ರವೇಶಾತಿಗಾಗಿ ನಕಲಿ ಅಂಕಪಟ್ಟಿ ಬಳಸಿದ ಆರೋಪಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಅಯೋಧ್ಯೆಯ ಗೋಸಾಯಿಗಂಜ್‌ನ ಬಿಜೆಪಿ ಶಾಸಕ ಇಂದ್ರ ಪ್ರತಾಪ್ ಅಲಿಯಾಸ್ ಖಬ್ಬು ತಿವಾರಿ ವಿಧಾನಸಭೆಯ ಸದಸ್ಯತ್ವ ಕಳೆದುಕೊಂಡಿದ್ದಾರೆ.
28 ವರ್ಷಗಳ ಹಿಂದೆ ಕಾಲೇಜು ಪ್ರವೇಶಾತಿಗಾಗಿ ನಕಲಿ ಅಂಕಪಟ್ಟಿ ಬಳಸಿದ್ದಕ್ಕಾಗಿ ವಿಶೇಷ ನ್ಯಾಯಾಲಯವು ಖಬ್ಬು ತಿವಾರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ವಿಧಾನಸಭಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ ಇಂದ್ರ ಪ್ರತಾಪ್ ರನ್ನು ಉತ್ತರ ಪ್ರದೇಶದ ವಿಧಾನಸಭೆಯ ಸದಸ್ಯತ್ವದಿಂದಲೂ ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಯೋಧ್ಯೆ ಸಾಕೇತ್ ಪದವಿ ಕಾಲೇಜಿನ ಪ್ರಾಂಶುಪಾಲ ಯದುವಂಶ್ ರಾಮ್ ತ್ರಿಪಾಠಿ ಅವರು ತಿವಾರಿ ವಿರುದ್ಧ ನಕಲಿ ಅಂಕಪಟ್ಟಿ ಬಳಕೆಗೆ ಸಂಬಂಧಿಸಿದಂತೆ ರಾಮ ಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಯುತ್ತಿತ್ತು. ಅಯೋಧ್ಯೆಯ ವಿಶೇಷ ನ್ಯಾಯಾಲಯದ ನ್ಯಾಯಧೀಶ ಪೂಜಾ ಸಿಂಗ್ ಅವರು ಅಕ್ಟೋಬರ್ 18ರಂದು ತೀರ್ಪು ನೀಡಿದ್ದರು. ನಂತರ ಇಂದ್ರ ಪ್ರತಾಪ್ ರನ್ನು ಜೈಲಿಗೆ ರವಾನಿಸಲಾಯಿತು.
ಯುಪಿಯ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಖಬ್ಬು ತಿವಾರಿ ಅವರ ಸದಸ್ಯತ್ವವನ್ನು ಅಕ್ಟೋಬರ್ 18 ರಿಂದ ಕೊನೆಗೊಳಿಸಲಾಗುತ್ತದೆ ಎಂದು ಪರಿಗಣಿಸಲಾಗಿದೆ.2017ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ