ಬೆಳಗಾವಿ: ಮತಾಂತರ ನಿಷೇಧದಂತಹ ಕಾಯ್ದೆ ಜಾರಿಗೆ ತಂದು ದೇಶ ವಿಭಜನೆ ಮಾಡಲು ಹೊರಡಬೇಡಿ ಎಂದು ಮಾಜಿ ಸಚಿವ ಕೆ.ಜೆ ಜಾರ್ಜ್ ಹೇಳಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ ಬಲವಂತವಾಗಿ ಮತಾಂತರ ಮಾಡುವಂತಿಲ್ಲ ಅಂತ. ಆದ್ರೆ ಇಷ್ಟ ಬಂದಂತ ಧರ್ಮಕ್ಕೆ ಹೋಗಬಹುದು ಅಂತಿದೆ.ಬಲವಂತವಾಗಿ ಮತಾಂತರ ಆಗೋದಕ್ಕೆ ನಮ್ಮದು ವಿರೋಧವಿದೆ ಎಂದರು.
ಈ ಕಾನೂನು ತರುವ ಮೂಲಕ ಕೆಲವರಿಗೆ ನೈತಿಕ ಪೊಲೀಸ್‌ಗಿರಿಗೆ ಅವಕಾಶ ಮಾಡಿಕೊಟ್ಟಂತೆ ಆಗಲಿದೆ. ಹಿಂದು ಧರ್ಮವಾಗ್ಲಿ ಅಥಾವ ಬೇರೆ ಧರ್ಮವಾಗ್ಲಿ ಶಕ್ತಿಯುಕ್ತವಾಗಿದೆ. ಮೊಗಲರು, ಡಚ್ಚರು, ಪೋರ್ಚುಗೀಸರು ಬಂದರೂ, ಹಿಂದು ಧರ್ಮದ ಜನ ಸಂಖ್ಯೆ ಹೆಚ್ಚಿದೆ. ಕ್ರೈಸ್ತ ಸಮುದಾಯದ ಜನಸಂಖ್ಯೆ ಮೊದಲಗಿಂತ ಕಡಿಮೆ ಇದೆ. ರಾಜಕೀಯದ ದುರುದ್ದೇಶದಿಂದ ಈ ಕಾಯ್ದೆ ತರೋದಕ್ಕೆ ಹೊರಟಿದ್ದಾರೆ ಎಂದು ಆರೋಪಿಸಿದರು.
ಇಂಥ ಕಾಯ್ದೆ ತಂದು ದೇಶವಿಭಜನೆ ಮಾಡೋಕೆ ಹೊರಡಬೇಡಿ ಎಂದು ಸಿಎಂ ಹಾಗೂ ಅವರ ಪಕ್ಷದವರಿಗೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಕೆಜೆ ಜಾರ್ಜ್ ಹೇಳಿದರು.
ಮತಾಂತರ ನಿಷೇಧ ಕಾಯ್ದೆಯನ್ನು ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಸರಕಾರ ಮಂಡಿಸುವ ಸಾಧ್ಯತೆ ಇದೆ. ಈ ಬಗ್ಗೆ ಬಿಜೆಪಿಯ ಪ್ರಮುಖ ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಸೂದೆ ಮಂಡಿಸದಂತೆ ವಿರೋಧ ವ್ಯಕ್ತಪಡಿಸಿದೆ. ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.
















ಇನ್ನಷ್ಟು ಸುದ್ದಿಗಳು
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ