ಉಪ್ಪಿನಂಗಡಿ: ಇಲ್ಲಿನ ಹಳೇ ಗೇಟು ಎಂಬಲ್ಲಿ ಹಸಿ ಮೀನು ಸ್ಟಾಲ್ ನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ನಡೆದ ತಲ್ವಾರು ದಾಳಿಗೆ ಸಂಬಂಧಿಸಿದಂತೆ ಪಿಎಫ್ಐ ನಾಯಕರ ಅಕ್ರಮ ಬಂಧನವನ್ನು ಖಂಡಿಸಿ ನಡೆಯುತಿದ್ದ ಪ್ರತಿಭಟನೆ ಹಠಾತ್ ಆಗಿ ಹಿಂಸೆಯರೂಪ ತಾಳಿದ್ದು ಪೊಲೀಸರ ಲಾಠೀ ಚಾರ್ಜ್’ಗೆ 10 ಕ್ಕೂ ಅಧಿಕ ಕಾರ್ಯಕರ್ತರು ಗಾಯಗೊಂಡಿದ್ದಾರೆ.
ತಲ್ವಾರು ದಾಳಿಗೆ ಸಂಬಂಧಿಸಿದಂತೆ ಡಿ.14 ರಂದು ಬೆಳಿಗ್ಗೆ ಮೂವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿರಿಸಿದ ಘಟನೆಗೆ ಸಂಬಂಧಿಸಿದಂತೆ ಠಾಣೆಯ ಮುಂಭಾಗದಲ್ಲಿ ಇಂದು ಬೆಳಗ್ಗಿನಿಂದ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಸಂಜೆಯವರೆಗೆ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯು, ಸಂಜೆಯ ಬಳಿಕ ಪೋಲೀಸರಿಂದ ಹಠಾತ್ ಲಾಟಿ ಚಾರ್ಜ್ ನಡೆದಿದ್ದು ಹತ್ತಕ್ಕಿಂತಲೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಸಯ್ಯಿದ್ ಅಲ್ ಹಾದಿ ಆತೂರ್ ತಂಙಳ್ ರವರು ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ವಶಕ್ಕೆ ಪಡೆದುಕೊಂಡವರನ್ನು ಸಂಜೆಯ ಬಳಿಕ ಬಿಡುಗಡೆಗೊಳಿಸುತ್ತೇವೆ ಎಂದು ಪೊಲೀಸರು ಭರವಸೆ ನೀಡಿದ್ದರಿಂದ ಪ್ರತಿಭಟನಾಕಾರರು ಸ್ಥಳದಿಂದ ತೆರಳಿದ್ದರು. ರಾತ್ರಿ ವೇಳೆ ಇನ್ನೂ ಇಬ್ಬರು ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಮತ್ತೆ ಜನ ಜಮಾಯಿಸಿದರು. ಈ ವೇಳೆ, ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ನಡೆಸಿದರು.
ಸಂಜೆ ವೇಳೆ ಸ್ಥಳಕ್ಕಾಗಮಿಸಿದ್ದ ಪುತ್ತೂರು ತಹಶೀಲ್ದಾರ್ ಟಿ. ರಮೇಶ್ ಬಾಬು ಅವರು ಈ ಪ್ರದೇಶದಲ್ಲಿ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಪೋಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಪಿಎಫ್ಐನ ಉಪ್ಪಿನಂಗಡಿ ಜಿಲ್ಲಾ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್ ಮೆಜೆಸ್ಟಿಕ್, ಎಸ್ಡಿಪಿಐ ನೆಕ್ಕಿಲಾಡಿ ಗ್ರಾಮ ಸಮಿತಿ ಅಧ್ಯಕ್ಷ ಝಕಾರಿಯಾ ಕೊಡಿಪ್ಪಾಡಿ ಹಾಗೂ ಉಪ್ಪಿನಂಗಡಿ ಬ್ಲಾಕ್ ಸಮಿತಿ ಅಧ್ಯಕ್ಷ ಮುಸ್ತಾಫ ಲತೀಫಿ ಅವರನ್ನು ತಲವಾರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಪಿಎಫ್ಐ ಮುಖಂಡರೊಂದಿಗೆ ಮಾತುಕತೆ ನಡೆಸಿದ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದ ಅಬ್ದುಲ್ ಹಮೀದ್ ಮೆಜೆಸ್ಟಿಕ್ ಅವರನ್ನು ಮಾತ್ರ ಬಿಡುಗೊಡೆಗೊಳಿಸಿದ್ದರು.
ಸದ್ಯ ಉಪ್ಪಿನಂಗಡಿಯಲ್ಲಿ ಬಿಗುವಿನ ವಾತಾವರಣ ಮುಂದುವರಿದಿದ್ದು, ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮೀಸಲು ಪೋಲಿಸ್ ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ