ಬಂಟ್ವಾಳ:ಡಿ.28: ಕೇಂದ್ರ ಸರಕಾರದ ಪೆಟ್ರೋಲ್, ಡೀಸೆಲ್, ಆಟೋ ಎಲ್ ಪಿ ಜಿ ಹಾಗೂ ಇನ್ನಿತರ ದಿನಬಳಕೆಯ ವಸ್ತುಗಳ ಬೆಲೆಯೇರಿಕೆ ವಿರುದ್ಧ ಇಂದು ಬಿ ಸಿ ರೋಡಿನ ಕೈಕಂಬದಲ್ಲಿ ಎಸ್ಡಿಪಿಐ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಸಾಹುಲ್ ಹಮೀದ್ ಎಸ್ ಎಚ್, ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಪೊನ್ನೋಡಿ ಇವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಸ್ ಡಿ ಟಿ ಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಲಿಕ್, ಖಾದರ್ ಆಲಂಪಾಡಿ ಎಸ್ ಡಿ ಟಿ ಯು ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರು , ಎಸ್ ಡಿ ಎ ಸಿ ಯು ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷರಾದ ಶಂಸುದ್ದೀನ್ ಪಲ್ಲಿಮಜಲ್ ಅಶ್ರಫ್ ಅಧ್ಯಕ್ಷರು ಟೆಂಪೋ ಯೂನಿಯನ್ ಕೈಕಂಬ ಭಾಗವಹಿಸಿದ್ದರು.ಈ ಪ್ರತಿಭಟನೆಯಲ್ಲಿ ಆಟೋ ಚಾಲಕರು, ಟೆಂಪೋ ಚಾಲಕರು ಹಾಗೂ ಇನ್ನಿತರ ವಾಹನಚಾಲಕರು ಪಾಲ್ಗೊಂಡಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.ಸಂಶುದ್ದೀನ್ ಪಲ್ಲಮಜಲು ಸ್ವಾಗತಿಸಿ ಮಲಿಕ್ ಕೊಳಕೆ ಧನ್ಯವಾದಗೆಯ್ದರು.