ಮಂಗಳೂರು: ನಗರದ ಮಾರ್ನಮಿಕಟ್ಟೆಯ ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೋಮ್ ನ್ನು ಇಟ್ಟು ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದೇವದಾಸ್ ದೇಸಾಯಿ(62) ಎಂದು ಗುರುತಿಸಲಾಗಿದ್ದು, ಮಿತ್ರ ನಗರ, ಕೊಂಡಾಣ ಕೋಟೇಕಾರು ನಿವಾಸಿಯಾಗಿದ್ದಾನೆಂದು ತಿಳಿದು ಬಂದಿದೆ.
ಆರೋಪಿ ಈ ಹಿಂದೆಯೂ ಹಲವು ದೇವಸ್ಥಾನ, ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿರುವುದು ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಕೆಳಕಂಡ ಸ್ಥಳಗಳಲ್ಲಿನ ದೈವಸ್ಥಾನ, ಕೊರಗಜ್ಜ ಕಟ್ಟೆ, ಮಸೀದಿ, ಸಿಖ್ ಗುರುದ್ವಾರ( ಕೂಳೂರು) ಮುಂತಾದ ಕಡೆಗಳಲ್ಲಿನ ಕಾಣಿಕೆ ಡಬ್ಬಿಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತ ಲೇಖನ ಹಾಕಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
ಆರೋಪಿ ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಧಾರ್ಮಿಕ ಕೃತಿಗಳ ಮೂಲಕ ಧರ್ಮ ಪ್ರಚಾರ ನಡೆಸುತ್ತಿದ್ದ ಎಂದು
1. ಮಾರ್ನಮಿಕಟ್ಟೆ ಕೊರಗಜ್ಜ ಕಟ್ಟೆ
2. ಬಾಬುಗುಡ್ಡೆ ಕೊರಗಜ್ಜನ ಕಾಣಿಕೆ ಡಬ್ಬಿ
3. ಕೊಂಡಾಣ ದೈವಸ್ಥಾನ
4. ಮಂಗಳಾದೇವಿ ದೇವಸ್ಥಾನ
5. ಕದ್ರಿ ದೇವಸ್ಥಾನದ ಬಳಿಯಲ್ಲಿರುವ ರಿಕ್ಷಾ ಪಾರ್ಕ್ ನ ಬಳಿ ಕಾಣಿಕೆ ಡಬ್ಬಿ
6. ಕಲ್ಲುರ್ಟಿ ದೈವಸ್ಥಾನ, ಒಮೆಗಾ ಆಸ್ಪತ್ರೆ ಬಳಿ, ಪಂಪ್ ವೆಲ್ ಬಳಿ
7. ಉಳ್ಳಾಲದ ದರ್ಗಾ ಬಳಿಯ ಮಸೀದಿಯ ಕಾಣಿಕೆ ಡಬ್ಬಿ
8. ಕಲ್ಲಾಫು ನಾಗನ ಕಟ್ಟೆ
9. ಕೊಟ್ಟಾರ ಚೌಕಿಯ ಕಲ್ಲುರ್ಟಿ ದೈವಸ್ಥಾನ
10. ಉರ್ವಾ ಮಾರಿಗುಡಿ ದೇವಸ್ಥಾನದ ಕಾಣಿಕೆ ಡಬ್ಬಿ
11. ಕುತ್ತಾರು ಕೊರಗಜ್ಜನ ಕಟ್ಟೆ
12. ಕುಡುಪು ದೈವಸ್ಥಾನ
13. ಉಳ್ಳಾಲದ ಕೊರಗಜ್ಜನ ಕಾಣಿಕೆ ಡಬ್ಬಿ
14. ನಂದಿಗುಡ್ಡೆಯ ಕೊರಗಜ್ಜನ ಗುಡಿ
15. ಎ ಬಿ ಶೆಟ್ಟಿ ವೃತ್ತದ ಬಳಿಯ ದರ್ಗಾ
16. ಸಿಖ್ ಗುರುದ್ವಾರ ಗುಡಿ- ಬಂಗ್ರ ಕೂಳೂರು
17. ಕೋಟ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ- ಮಂಕಿಸ್ವಾಂಡ್
18. ಆದಿ ಮಾಹೇಶ್ವರಿ ದೈವಸ್ಥಾನ ಭಜನಾ ಮಂಡಳಿ ಕಾಣಿಕೆ ಡಬ್ಬಿ- ಜೆಪ್ಪು ಮಹಾಕಾಳಿ ಪಡ್ಪು
1997 ನೇ ಇಸವಿಯಲ್ಲಿ ಕೆಲಸ ಹುಡುಕಿಕೊಂಡು ಮಂಗಳೂರಿಗೆ ಬಂದಿರುವ ದೇಸಾಯಿ ಮಂಗಳೂರಿನ ಬಂದರಿನ ವಿ.ಆರ್.ಎಲ್. ಟ್ರಾನ್ಸ್ ಪೋರ್ಟ್ ಕಚೇರಿಯಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಆ ಸಮಯ ಸುರತ್ಕಲ್ ಸೂರಿಂಜೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ. ಆತನ ಹೆಂಡತಿ ಹಾಗೂ ಮಗಳು ಹುಬ್ಬಳ್ಳಿಯ ಮನೆಯಲ್ಲಿದ್ದವರು ಅತ್ತಿಗೆಯ ಜೊತೆಗೆ ಮನಸ್ತಾಪ ಮಾಡಿಕೊಂಡು ಅವಳ ಸ್ವಂತ ಊರಾದ ಚಿಕ್ಕಮಗಳೂರಿಗೆ ಹೋದವರು ನಂತರ ಪತಿ ದೇಸಾಯಿಯನ್ನು ದೂರ ಮಾಡಿದ್ದರು.
2006 ನೇ ಇಸವಿಯಲ್ಲಿ ತಲಪಾಡಿ ಕೆ.ಸಿ. ರೋಡ್ ಬಳಿ ಅಂತೋನಿ ರಾಜ್ ಎಂಬವರ ಮನೆಯನ್ನು ಖರೀದಿ ಮಾಡಿದ್ದು, ಪ್ರಸ್ತುತ ಇದೇ ಮನೆಯಲ್ಲಿ ಒಬ್ಬಂಟಿಯಾಗಿ ವಾಸಮಾಡಿಕೊಂಡಿದ್ದಾನೆ. ಸರಿಯಾದ ಕೆಲಸವಿಲ್ಲದೆ ಗುಜಿರಿ ಪೇಪರ್ ಬಾಕ್ಸ್ ಗಳನ್ನು ಮಾರಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿರುವುದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.
ಕೃತ್ಯದ ಬಗ್ಗೆ ಪಶ್ಚಾತ್ತಾಪವಿಲ್ಲ ಎಂದ ಆರೋಪಿ
ಬೈಬಲ್ ನಲ್ಲಿ ಜಗತ್ತಿನ ಅಂತ್ಯದ ಬಗ್ಗೆ ವಿವರಿಸಿದೆ. ದೇವರು ದುರಾತ್ಮಗಳನ್ನು ಹೊರ ತಳ್ಳಿದ್ದಾನೆ. ಅದನ್ನು ಅನಾದಿ ಕಾಲದಿಂದ ಭೂಮಿಯಲ್ಲಿ ಆರಾಧಿಸಲಾಗುತ್ತಿದೆ. ಜಗತ್ತಿನ ಅಂತ್ಯದ ಸಮಯಕ್ಕೆ ಮುಕ್ತಿ ಹೊಂದಬೇಕಾದರೆ ಏಸುನನ್ನು ಆರಾಧಿಸಬೇಕು. ಹಾಗಾಗಿ ಅಶುದ್ಧಿಯ ತಾಣಗಳಿಗೆ ಅಶುದ್ಧಿಯೇ ಕಾಣಿಕೆಯಾಗಿದೆ. ಆದ್ದರಿಂದ ಅಲ್ಲಲ್ಲಿ ಸಿಕ್ಕ ಬಳಸಿದ ಕಾಂಡೋಮ್ ಹಾಕುತ್ತಿದ್ದೆ ಎಂದು ಆರೋಪಿ ತನ್ನ ಕೃತ್ಯದ ಬಗ್ಗೆ ವಿವರಿಸಿದ್ದಾನೆ.
ನಾನು ಮಾಡಿರುವ ಕೃತ್ಯದ ಬಗ್ಗೆ ಪಶ್ಚಾತ್ತಾಪವಿಲ್ಲ. ಹಿಂದೆ ಬರಹದ ಮೂಲಕ ಧರ್ಮ ಪ್ರಚಾರ ಮಾಡುತ್ತಿದ್ದೆ. ಈಗ ಕಾಂಡೋಮ್ ಮೂಲಕ ಮೂರ್ತಿಗಳನ್ನು ಅವಮಾನಿಸುತ್ತಿದ್ದೇನೆ. ದೇವರು ದುರಾತ್ಮಗಳನ್ನು ಅವಮಾನಿಸಲೆಂದೇ ಕಾಂಡೋಮ್ ಹಾಕಿದ್ದೇನೆ. ಬೈಬಲ್ ನಲ್ಲಿ ಏಸು ಕ್ರಿಸ್ತ ಈ ಕುರಿತು ವಿವರಿಸಿದ್ದಾನೆ ಎಂದು ಆರೋಪಿ ದೇವದಾಸ ದೇಸಾಯಿ ಸ್ಫೋಟಕ ಹೇಳಿಕೆ ನೀಡಿದ್ದಾನೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ