ಜಿದ್ದಾ : ಪವಿತ್ರ ಮಕ್ಕಾ ಮತ್ತು ಮದೀನಾ ಹರಮ್ ಮಸೀದಿಗಳಲ್ಲಿ ಕೋವಿಡ್ ಪ್ರೋಟೋಕಾಲ್ಗಳಲ್ಲಿ ನೀಡಲಾಗಿದ್ದ ಕೆಲವು ವಿನಾಯಿತಿಯನ್ನು ಹಿಂಪಡೆಯಲಾಗಿದೆ. ಪ್ರಾರ್ಥನೆಗೆ ಆಗಮಿಸುವವರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಹರಮ್ ಕಾರ್ಯಾಲಯ ಸಲಹೆ ನೀಡಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ಪುನಃಸ್ಥಾಪಿಸಲಾಗಿದೆ. ಬಹುಪಾಲು ಜನರು ಲಸಿಕೆಯನ್ನು ಸ್ವೀಕರಿಸಿದ್ದಾರೆ ಮತ್ತು ಕೋವಿಡ್ ಪ್ರಕರಣಗಳು ತೀವ್ರವಾಗಿ ಇಳಿಮುಖವಾಗುತ್ತಿದ್ದ ಸಂದರ್ಭದಲ್ಲಿ ಮಕ್ಕಾ ಮತ್ತು ಮದೀನಾದ ಹರಂಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಲಾಗಿತ್ತು.
ಇದೀಗ ದೇಶದಲ್ಲಿ ಮತ್ತೆ ರೂಪಾಂತರಿ ಕೋವಿಡ್ ಹೊಸ ಅಲೆಯ ಹಿನ್ನೆಲೆಯಲ್ಲಿ, ನಿರ್ಬಂಧಗಳನ್ನು ಪುನಃಸ್ಥಾಪಿಸಲು ಪ್ರಾರಂಭಿಸಿದೆ. ಗುರುವಾರ ಬೆಳಗ್ಗೆ 7 ಗಂಟೆಯಿಂದ ಉಮ್ರಾ ಯಾತ್ರಿಕರು ಮತ್ತು ಪ್ರಾರ್ಥನೆಗೆ ಆಗಮಿಸುವವರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.
ಪ್ರಾರ್ಥನೆ, ತವಾಫ್ ಮತ್ತು ಸಅ್ ಯ್ ಮೇಲಿನ ನಿರ್ಬಂಧಗಳನ್ನು ನಾಳೆಯಿಂದ ಪುನಃಸ್ಥಾಪಿಸಲಾಗುತ್ತದೆ. ಹರಂ ತಲುಪುವವರು ಪರವಾನಗಿಯಲ್ಲಿ ತಿಳಿಸಲಾದ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು.
ಹರಂಗಳಲ್ಲಿನ ನಿರ್ಬಂಧಗಳು ಉದ್ಯೋಗಿಗಳಿಗೂ ಅನ್ವಯಿಸುತ್ತವೆ. ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯವು ದೇಶಾದ್ಯಂತ ಎಲ್ಲಾ ಮಸೀದಿಗಳು ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಶಿಫಾರಸು ಮಾಡಿದೆ. ಮಸೀದಿಗಳಿಗೆ ಹಾಜರಾಗುವವರು ಕೋವಿಡ್ ತಡೆಗಟ್ಟುವ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಮಸೀದಿಯ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?