ಬೆಂಗಳೂರು: ಕನ್ನಡ ಬಾವುಟ ಸುಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿದ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ನಾಳೆ ಡಿ.31ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಅನ್ನು ವಾಟಾಳ್ ನಾಗರಾಜ್ ಹಿಂಪಡೆದಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಮನವೊಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್, ನಾಳೆ ನಡೆಯಬೇಕಾಗಿದ್ದ ಬಂದ್ ಇರಲ್ಲ. ಸಿಎಂ ಭರವಸೆ ಹಿನ್ನೆಲೆ ನಾಳೆಯ ಬಂದ್ ವಾಪಾಸ್ ಪಡೆದಿರೋದಾಗಿ ತಿಳಿಸಿದರು.
ನಾಳೆ ಬಂದ್ ಇಲ್ಲ, ಬೆಂಗಳೂರಿನಲ್ಲಿ ಪ್ರತಿಭಟನೆ ಇರುತ್ತೆ. ಜನವರಿ 22ರಂದು ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಕನ್ನಡಪರ ಸಂಘಟನೆಯ ಒಕ್ಕೂಟದ ಸದಸ್ಯರು ಜ.22ರಂದು ಬಂದ್ ಮಾಡಲು ಒಮ್ಮತದ ನಿರ್ಧಾರ ಮಾಡಿದ್ದಾರೆ. ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್, ಕುಮಾರ್ ಒಕ್ಕೂಟದ ಸದಸ್ಯರು ಒಮ್ಮತದ ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದೇ ಹೋದಲ್ಲಿ ಜನವರಿ 22ರಂದು ಬಂದ್ ಮಾಡಲು ನಿರ್ಧರಿದ್ದೇವೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ಸಿಎಂ ಮನವೊಲಿಕೆ ಸಕ್ಸಸ್
ಸಿಎಂ ಎರಡು ಬಾರಿ ಮನವಿ ಮಾಡಿದ್ರು, ಇಂದು ಸಿಎಂ ಗೃಹಕಚೇರಿ ಕೃಷ್ಣಾಗೆ ಕರೆಸಿ ಮಾತಾಡಿದ್ರು. ಎಂಇಎಸ್ ನಿಷೇಧಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಬಂದ್ ಹಿಂದೆ ಪಡೆಯಿರಿ ಎಂದು ಸಿಎಂ ಮನವಿ ಮಾಡಿದರು. ಸಿಎಂ ಮನವಿಗೆ ಗೌರವ ಕೊಡಲು ನಿರ್ಧಾರ ಮಾಡಲಾಗಿದೆ. ಒಕ್ಕೂಟದ ಮುಖಂಡರು ಎಲ್ಲರೂ ನಾಳೆ ಬಂದ್ ಮಾಡಿದ್ರೆ ಹೊಸ ವರುಷಕ್ಕೆ ತೊಂದರೆ ಆಗುತ್ತೆ ಎಂದು ಬಂದ್ ಮುಂದೂಡಲು ಒತ್ತಡ ಹೇರಿದ್ದರು. ನನ್ನ ಜೀವನದಲ್ಲಿ ಈ ರೀತಿ ಒತ್ತಡ ಎಂದೂ ಬಂದಿದ್ದಿಲ್ಲ. ಹೀಗಾಗಿ ಬಂದ್ ವಾಪಸ್ ಪಡೆದಿರೋದಾಗಿ ವಾಟಾಳ್ ಸ್ಪಷ್ಟನೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ