ಬೆಂಗಳೂರು: ಓಮಿಕ್ರಾನ್ ಸೋಂಕು ತೀವ್ರವಾಗಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಜನವರಿ 7 ರಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಈ ಕುರಿತಾಗಿ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, ಮೂರನೇ ಅಲೆ ಬರೋದು ನಿಶ್ಚಿತ ಅನ್ನುವ ವಾತಾವರಣ ಇದೆ. ಬೆಂಗಳೂರು ರೆಡ್ ಝೋನ್ ಅಂತ ಕೇಂದ್ರ ಗುರುತಿಸಿದೆ. ಈ ನಿಟ್ಟಿನಲ್ಲಿ ಜನವರಿ 7 ಕ್ಕೂ ಮುನ್ನ ಒಂದು ಸಭೆ ಮಾಡ್ತೇವೆ. ಈ ಸಭೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತದೆ. ತಜ್ಞರು ಮಾಡುವ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿ ಮಾಡ್ತೇವೆ ಎಂದು ತಿಳಿಸಿದರು.
ಈ ಬಾರಿ ಯಾವುದೇ ಅಚಾತುರ್ಯ ಆಗದಂತೆ ಎಲ್ಲ ರೀತಿಯ ತಯಾರಿ ನಡೆಸಲಾಗುವುದು. ಈ ನಿಟ್ಟಿನಲ್ಲಿ ಸಭೆ ಮಾಡಲಾಗುವುದು. ಸಾರ್ವಜನಿಕರು ಸರ್ಕಾರ ತರುವ ಕಠಿಣ ನಿರ್ಬಂಧಕ್ಕೆ ಸಹಕಾರ ಕೊಡಬೇಕು. ಇಲ್ಲದೇ ಇದ್ದಲ್ಲಿ, ನಾವು ಕೂಡಾ ಪಶ್ಚಿಮ ಬಂಗಾಳ, ಮುಂಬಯಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ಲಾಕ್ಡೌನ್ ಮಾಡಬೇಕಾಗುತ್ತೆ ಎಂದರು.
ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮೂರನೇ ಅಲೆ ಬರುವ ಸಾಧ್ಯತೆಯೂ ಹೆಚ್ಚಾಗಿದೆ. ಈಗಾಗಲೇ ರಾತ್ರಿ 10 ರಿಂದ ಬೆಳಗ್ಗೆ ಐದರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಇದೀಗ ಮತ್ತಷ್ಟು ನಿರ್ಬಂಧಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧಾರ ಮಾಡಿದೆ. ಜನವರಿ 7 ರ ಒಳಗಾಗಿ ಸಿಎಂ ನೇತೃತ್ವದ ಸಭೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ