ಕೋಝಿಕ್ಕೋಡ್: ಕರ್ನಾಟಕದಲ್ಲಿ ಸುನ್ನಿ ಸಂಘಟನಾ ಚಟುವಟಿಕೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ರಚನಾತ್ಮಕ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸಲಾಗುವುದೆಂದು ಸುನ್ನೀ ಉಲಮಾ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಇಂಡಿಯನ್ ಗ್ರಾಂಡ್ ಮುಪ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದ್ದಾರೆ.
ಕಲ್ಲಿಕೋಟೆ ಸಮಸ್ತ ಇಸ್ಲಾಮಿಕ್ ಸೆಂಟರ್ ನಲ್ಲಿ ನಡೆದ ರಾಜ್ಯದ ಸುನ್ನೀ ಸಂಘಟನೆಗಳ ಸಂಯುಕ್ತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದಲ್ಲಿ ಸುನ್ನೀ ಚಳವಳಿ ಚುರುಕುಗೊಳ್ಳಲಿದೆ ಎಂದರು.

ಸಭೆಯನ್ನು ಕರ್ನಾಟಕ ಜಂಇಯತುಲ್ ಉಲಮಾ ಅಧ್ಯಕ್ಷ ಝೈನುಲ್ ಉಲಮಾ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ಉದ್ಘಾಟಿಸಿದರು.
ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಪೇರೋಡ್ ಅಬ್ದುರಹ್ಮಾನ್ ಸಖಾಫಿ, ಕೇರಳ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ವಂಡೂರ್ ಅಬ್ದುಲ್ ರಹ್ಮಾನ್ ಫೈಝಿ,ಕೇರಳ ರಾಜ್ಯ ಎಸ್.ವೈ.ಎಸ್. ಪ್ರಧಾನ ಕಾರ್ಯದರ್ಶಿ ಡಾ. ಅಬ್ದುಲ್ ಹಕೀಂ ಅಝ್ಹರಿ, ಡಾ. ಮುಹಮ್ಮದ್ ಕುಂಞ ಸಖಾಫಿ ಕೊಲ್ಲಂ ಮೊದಲಾದವರು ವಿವಿಧ ವಿಷಯಗಳ ಕುರಿತು ತರಗತಿ ನಡೆಸಿಕೊಟ್ಟರು.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಸುನ್ನೀ ಸಂಘ ಕುಟುಂಬದ ವಿವಿಧ ಸಂಘಟನೆಗಳ ಸಬಲೀಕರಣ, ಸದಸ್ಯತ್ವ ಸಮಯದ ಏಕೀಕರಣ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸುನ್ನೀ ಸಂಘಟನಾ ಚಳುವಳಿಯ ವಿಸ್ತರಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಕರ್ನಾಟಕ ಜಂಇಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಕೆ.ಪಿ. ಹುಸೈನ್ ಸಅದಿ, ಕೋಶಾಧಿಕಾರಿ ಅಬ್ದುಲ್ ರಝಾಕ್ ಮದನಿ, ಉಪಾಧ್ಯಕ್ಷರಾದ ಯು.ಕೆ.ಮುಹಮ್ಮದ್ ಸಅದಿ ವಳವೂರು, ಕಾಸಿಂ ಮದನಿ ಕರಾಯ, ಕಾರ್ಯದರ್ಶಿ ಎಸ್.ಪಿ ಹಂಝ ಸಖಾಫಿ, ಟಿ.ಎಂ ಮುಹ್ಯುದ್ದೀನ್ ಕಾಮಿಲ್ ಸಖಾಫಿ ತೋಕೆ, ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷರಾದ ಶಾಫಿ ಸಅದಿ, ಕರ್ನಾಟಕ ಮುಸ್ಲಿಮ್ ಜಮಾಅತ್ ಉಪಾಧ್ಯಕ್ಷ ಉಮರ್ ಹಾಜಿ ಅಭಿಮಾನ್ ಬೆಂಗಳೂರು, ಕಾರ್ಯದರ್ಶಿಗಳಾದ ಅಬ್ದುಲ್ ಹಮೀದ್ ಬಜ್ಪೆ , ಕೆ.ಎಂ ಸಿದ್ದೀಕ್, ಎಂ.ಬಿ. ಸಾದಿಕ್ ಮಲೆಬೆಟ್ಟು, ಎಂ.ಬಿ.ಹಮೀದ್ ಮಡಿಕೇರಿ, ಹಸೈನಾರ್ ಆನೆಮಹಲ್, ಸುನ್ನೀ ಯುವಜನ ಸಂಘ ರಾಜ್ಯಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಲ್ ಸಅದಿ ಕೊಳಕೇರಿ, ಕೋಶಾಧಿಕಾರಿ ಅಬ್ದುಲ್ ಹಕೀಂ ಕೊಡ್ಲಿಪೇಟೆ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್, ಕೋಶಾಧಿಕಾರಿ ಸುಫ್ಯಾನ್ ಸಖಾಫಿ, ಇಹ್ಸಾನ್ ಕರ್ನಾಟಕದ ಅಬ್ದುರಹ್ಮಾನ್ ಕಲ್ಕಟ್ಟ, ಕೆ.ಎಚ್. ಇಸ್ಮಾಈಲ್ ಸಅದಿ, ಶಾಹುಲ್ ಹಮೀದ್ ಮುಸ್ಲಿಯಾರ್, ಇಸ್ಹಾಕ್ ಝುಹ್ರಿ, ಸಿರಾಜುದ್ದೀನ್ ಸಖಾಫಿ, ಅಶ್ರಫ್ ಕಿನಾರ ಹಾಗೂ ಇತರ ಪ್ರತಿನಿಧಿಗಳು ಉಪಸ್ಥಿತರಿದ್ದರು.


















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ