ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ SSF ರಾಜ್ಯ ದಅವಾ ವಿಭಾಗದ ವತಿಯಿಂದ ಅಲ್ ವಿಫಾಕ್ -22 ಕಾರ್ಯಕ್ರಮವು ಶಿವಮೊಗ್ಗ ಮರ್ಕಝ್ ಸ’ಅದ ದಲ್ಲಿ ಜನವರಿ 13 ಗುರುವಾರ ಮಧ್ಯಾಹ್ನ 1:00 ಗಂಟೆಗೆ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ರವರ ನೇತೃತ್ವದಲ್ಲಿ ನಡೆಯಲಿದೆ.
ರಾಜ್ಯದ ಎಲ್ಲ ಜಿಲ್ಲೆ ಗಳ ಹಾಗೂ ಡಿವಿಷನ್ಗಳ ದಅವಾ ಕಾರ್ಯದರ್ಶಿಗಳು ಮತ್ತು ಕನ್ವೀನರ್ ಗಳು ಭಾಗವಹಿಸುವ ಈ ಸಂಗಮದಲ್ಲಿ ಎಸ್ ವೈ ಎಸ್ ನಾಯಕ ಸಯ್ಯಿದ್ ಯೂಸುಫ್ ಅಲ್ ಬುಖಾರಿ ಮಾಲಿಕೊಪ್ಪ ದುಆ ನೆರವೇರಿಸಲಿದ್ದಾರೆ ಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಉದ್ಘಾಟಿಸಲಿದ್ದಾರೆ.
ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಜಬ್ಬಾರ್ ಸಅದಿ ರಾಜ್ಯ ವಿಸ್ಡಮ್ ಕಾರ್ಯದರ್ಶಿ ಎನ್ ಸಿ ರಹೀಮ್ ಕಾರ್ಕಳ ಮುಖ್ಯ ಅತಿಥಿ ಗಳಾಗಿ ಆಗಮಿಸಲಿಕ್ಕಿದ್ದಾರೆ.
ರಾಜ್ಯಾಧ್ಯಕ್ಷರಾದ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ ಮತ್ತು ರಾಜ್ಯ ಕೋಶಾಧಿಕಾರಿ ಸುಫ್ಯಾನ್ ಸಖಾಫಿ ಕೊಪ್ಪಳ ಹಾಗೂ ರಾಜ್ಯ ದಅವಾ ಸಿಂಡಿಕೇಟ್ ಸದಸ್ಯರಾದ ಹಬೀಬ್ ನೂರಾನಿ ಅಸ್ಸಖಾಫಿ ತರಗತಿ ಮಂಡಿಸಲಿದ್ದಾರೆ.
ನಂತರ ಚರ್ಚಾಗೋಷ್ಠಿ ಕೂಡ ನಡೆಯಲಿದೆ ಎಂದು ರಾಜ್ಯ ದಅ ವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಮತ್ತು ರಾಜ್ಯ ದಅವಾ ಕನ್ವೀನರ್ ಯಾಸೀನ್ ಸಖಾಫಿ ಹಾವೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ