ನವದೆಹಲಿ,ಫೆ.7-ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಕುರಿತಾಗಿ ಹೈಕೋರ್ಟ್ ನೀಡುವ ತೀರ್ಪಿನ ತನಕ ವಿದ್ಯಾರ್ಥಿಗಳು ಶಾಂತಿ ರೀತಿಯಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ನಾನು ಹೆಚ್ಚು ಪ್ರತಿಕ್ರಿಯಿಸಲಾರೆ. ಅಂತಿಮವಾಗಿ ನ್ಯಾಯಾಲಯ ನೀಡುವ ತೀರ್ಪಿಗೆ ಸರ್ಕಾರ ಬದ್ದವಾಗಿರುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಪ್ರಚೋದನೆಗೆ ಒಳಗಾಗದೆ ಸಂಯಮವನ್ನು ಕಾಪಾಡಿಕೊಳ್ಳಬೇಕು. ಅನಗತ್ಯವಾಗಿ ಶಾಲಾಕಾಲೇಜುಗಳ ಬಗ್ಗೆ ಗೊಂದಲ ಸೃಷ್ಟಿಸಿ ಬೇರೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಕೊಡಬೇಡಿ ಎಂದು ಕಿವಿಮಾತು ಹೇಳಿದರು.ಹಿಜಾಬ್ ಧರಿಸುವ ಕುರಿತಂತೆ ದೇಶಾದ್ಯಂತ ಚರ್ಚೆಯಾಗಿದೆ. ಕೇರಳ ಮತ್ತು ಮಹಾರಾಷ್ಟ್ರ ನ್ಯಾಯಾಲಯ ಇದರ ಬಗ್ಗೆ ತೀರ್ಪನ್ನು ಕೂಡ ಕೊಟ್ಟಿದೆ. ಕೆಲವು ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಾಯಶಃ ಎರಡುಮೂರು ದಿನದೊಳಗೆ ತೀರ್ಪು ಬರಬಹುದು. ಅಲ್ಲಿಯವರೆಗೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡಿದರು.
ಶಾಲಾಕಾಲೇಜುಗಳಲ್ಲಿ ಸಮವಸ್ತ್ರ ಕುರಿತಾಗಿ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯಷ್ಟೇ ಅಸೂಚನೆಯನ್ನು ಸಹ ಹೊರಡಿಸಿದೆ. ಆಡಳಿತ ಮಂಡಳಿಯವರು ಹಾಗೂ ಎಸ್ಡಿಎಂಸಿಯವರು ತಮ್ಮ ಕಾಲೇಜು ಅನುಗುಣವಾಗಿ ಸಮವಸ್ತ್ರ ಬಗ್ಗೆ ತೀರ್ಮಾನಿಸುತ್ತಾರೆ ಎಂದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ