ಉಡುಪಿ: ನಿನ್ನೆ ಹಿಜಾಬ್ ವಿವಾದದ ಬಗ್ಗೆ ಜರುಗಿದ ಶಾಂತಿಸಭೆಯ ಬಳಿಕ ಎಸ್ಬಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಶಾಂತಿಸಭೆಯಲ್ಲಿ ರಘುಪತಿ ಭಟ್ ಸಹಿತ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್, ಅಂತಿಮ ತೀರ್ಪು ಬರುವವರೆಗೆ ಎಲ್ಲಾ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ವಸ್ತ್ರ ಧರಿಸದಂತೆ ಮಧ್ಯಂತರ ಆದೇಶ ಹೊರಡಿಸಿತ್ತು. ನ್ಯಾಯಾಲಯದ ಆದೇಶದಂತೆ ಫೆ.14 ರಂದು ಕಾಲೇಜು ಪುನರಾರಂಭಗೊಂಡಿತ್ತು. ಅದರ ಪೂರ್ವಭಾವಿಯಾಗಿ ಸರ್ವಪಕ್ಷ ಸಭೆ ಆಯೋಜಿಸಲಾಗಿತ್ತು.
ಸದ್ರಿ ಸಭೆಯಲ್ಲಿ ಎಸ್ಬಿಪಿಐ ಉಡುಪಿ ಜಿಲ್ಲಾಧ್ಯಕ್ಷರಾದ ನಝೀರ್ ಅಹ್ಮದ್ ಅವರು ನೀಡಿರುವ ಹೇಳಿಕೆಯು ಎಲ್ಲರಿಗೂ ಆಶ್ಚರ್ಯ ಮತ್ತು ಚಿಂತಾ ಚಕಿತಗೊಳಿಸಿದೆ. ನಝೀರ್ ಅಹಮದ್ ಮಾತನಾಡಿ, ಬುದ್ಧಿವಂತರ ಜಿಲ್ಲೆಯಲ್ಲಿ ನಡೆಯಬಾರದ ಘಟನೆ ನಡೆದಿದೆ. ಹಿಜಾಬ್ ವಿವಾದ ಸೌಹಾರ್ದಯುತವಾಗಿ ಬಗೆಹರಿದು ಜಿಲ್ಲೆಯಲ್ಲಿ ಶಾಂತಿ ಸೌಹಾರ್ದ ನೆಲೆಸಬೇಕು’ ಎಂದು ಅಭಿಪ್ರಾಯಪಟ್ಟರು.
ಹಿಜಾಬ್ ವಿಚಾರದಲ್ಲಿ ಕೆಲವು ವಿದ್ಯಾರ್ಥಿನಿಯರು ಸಾಂವಿಧಾನಿಕ ಹಕ್ಕುಗಳಿಗೆ ಒತ್ತಾಯಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಹಿಜಾಬ್ ಧರಿಸುವುದು, ಬಿಡುವುದು ವಿದ್ಯಾರ್ಥಿನಿಯರ ವೈಯಕ್ತಿಕ ಸ್ವಾತಂತ್ರ್ಯವಾಗಿದ್ದು ಎಸ್‌ಡಿಪಿಐ ಮಧ್ಯೆ ಪ್ರವೇಶಿಸುವುದಿಲ್ಲ ಎಂದರು.
ಇಷ್ಟರವರೆಗೆ ಸಿಎಫ್‌ಐ ಮತ್ತು ಪಿಎಫ್‌ಐ ನಡೆಸಿದ ಪ್ರತಿಭಟನೆಗೆ ವಿರುದ್ಧ ನಿಲುವು ಪ್ರಕಟಿಸಿದ ಬಗ್ಗೆ ನಝೀರ್ ಅವರು ಸ್ವಪಕ್ಷೀಯರಿಂದಲೇ ಟೀಕೆಗೊಳಗಾಗಿದ್ದಾರೆ.
“ಹಿಜಾಬ್ ರಹಿತವಾಗಿ ಶಾಲೆಗೆ ಕಳುಹಿಸುವುದು ಪೋಷಕರಿಗೆ ಬಿಟ್ಟ ತೀರ್ಮಾನ” ಎಂದಿದ್ದಕ್ಕೆ ಪ್ರತಿಕ್ರಿಯಿಸಿದ ಒಬ್ಬರು, ಶಾಂತಿಯುತವಾಗಿ ಬಗೆಹರಿಸಲು ಇಷ್ಟು ದಿವಸ ಪ್ರತಿಭಟನೆ ಮಾಡಿ ಈಗ ನೆನಪಾಯಿತೆ ? ಎಂದು ಪ್ರಶ್ನಿಸಿದ್ದರು.
ಮತ್ತೊಬ್ಬರು ಸಿಎಫ್‌ಐ ಕಾರ್ಯಕರ್ತ, ನಝೀರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಹಿಜಾಬ್ ರಹಿತವಾಗಿ ಕಾಲೇಜಿಗೆ ಕಳುಹಿಸುವುದಾದರೆ ಇಷ್ಟು ದಿವಸ ಹೋರಾಟ ಮಾಡಿದ್ದು ಯಾವ ಪುರುಷಾರ್ಥಕ್ಕೆ ಅಂತ ಕ್ರೋಧ ವ್ಯಕ್ತಪಡಿಸಿದ್ದಾರೆ.
ಮತ್ತೊಬ್ಬ ಎಸ್ಟಿಪಿಐ ಕಾರ್ಯಕರ್ತ, ಅವತ್ತು ಶಾಸಕ ಯುಟಿಕೆ ಹೇಳಿದ ಸಣ್ಣ ವಿಚಾರದ ಬಗ್ಗೆ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದೆ. ಇವತ್ತು ನಮ್ಮವರೇ ಹಿಜಾಬ್ ರಹಿತ ಹೇಳಿಕೆ ಕೊಟ್ಟು ನಮ್ಮನ್ನು ತೀವ್ರ ಮುಜುಗರಕ್ಕೀಡುಮಾಡಿದ್ದಾರೆ ಎಂದು ನೋವು ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ