ಬೆಂಗಳೂರು,ಫೆ.17-ರಾಷ್ಟ್ರ ಧ್ವಜ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಕಾಂಗ್ರೆಸ್ ವಿಧಾನಸಭೆಯಲ್ಲಿ ತನ್ನ ಪ್ರತಿಭಟನೆಯನ್ನು ಮುಂದುವರೆಸಿದೆ.
ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‍ನ ಎಲ್ಲಾ ಸದಸ್ಯರು ಸದನದ ಬಾವಿಗಿಳಿದು ತಮ್ಮ ಪ್ರತಿಭಟನೆ ಮುಂದುವರೆಸಿ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ದೇಶ ದ್ರೋಹಿ ಬಿಜೆಪಿ, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಈಶ್ವರಪ್ಪ ರಾಜೀನಾಮೆ ನೀಡಬೇಕು. ನಮಗೆ ನ್ಯಾಯ ಬೇಕು. 40 ಪರ್ಸೆಂಟ್ ಕಮಿಷನ್ ಸರ್ಕಾರ, ಆರ್‍ಎಸ್‍ಎಸ್ ಕೈಗೊಂಬೆ ಎಂದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪ್ರಶ್ನೋತ್ತರ ಕಲಾಪ ಮುಗಿಯಲಿ. ಅನೇಕ ಶಾಸಕರ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ನೀವೆಲ್ಲರೂ ಮೊದಲು ನಿಮ್ಮ ನಿಮ್ಮ ಸ್ಥಾನಗಳಿಗೆ ತೆರಳಿ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.
ಇದನ್ನು ಒಪ್ಪದ ಪ್ರತಿಭಟನಾ ನಿರತ ಸದಸ್ಯರು. ನಮಗೆ ಮೊದಲು ನ್ಯಾಯ ಕೊಡಿ. ಈಶ್ವರಪ್ಪ ಅವರಿಂದ ತಕ್ಷಣವೇ ರಾಜೀನಾಮೆ ಪಡೆಯಲು ಸಂಬಂಧಪಟ್ಟವರಿಗೆ ಸೂಚನೆ ನೀಡಿ. ನಮಗೆ ನ್ಯಾಯ ಸಿಕ್ಕರೆ ಈಗಲೇ ಪ್ರತಿಭಟನೆ ಕೈ ಬಿಡುತ್ತೇವೆ ಎಂದು ಪ್ರತಿಭಟನಾ ನಿರತ ಸದಸ್ಯರು ಹೇಳಿದರು.
ಪುನಃ ಸಭಾಧ್ಯಕ್ಷರು ಎಲ್ಲಾ ಸದಸ್ಯರಿಗೂ ತಮ್ಮ ತಮ್ಮ ಸ್ವಸ್ಥಾನಗಳಿಗೆ ಮರಳಬೇಕೆಂದು ಮಾಡಿಕೊಂಡ ಮನವಿ ಪ್ರಯೋಜನವಾಗಲಿಲ್ಲ. ಕೊನೆಗೆ ಸದನವನ್ನು ಮಧ್ಯಾಹ್ನ 3 ಗಂಟೆವರೆಗೆ ಮುಂದೂಡಿದರು.
ಅಹೋರಾತ್ರಿ ಧರಣಿ:
ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ರಾತ್ರಿ ವಾಸ್ತವ್ಯಕ್ಕಾಗಿ ಹಾಸಿಗೆ, ದಿಂಬುಗಳನ್ನು ತರಿಸುವುದಕ್ಕೆ ಸೂಚನೆ ನೀಡಲಾಗಿದೆ.
ಸದನದಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸುವುದಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಹೀಗಾಗಿ ಪರಿಷತ್ ಹಾಗು ವಿಧಾನಸಭೆ ಸದಸ್ಯರಿಗೆ ರಾತ್ರಿ ಮಲಗುವುದಕ್ಕೆ ಅಗತ್ಯವಾದ ಹಾಸಿಗೆ- ದಿಂಬುಗಳನ್ನು ತರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಜತೆಗೆ ಭೋಜನ ವ್ಯವಸ್ಥೆಗೂ ಸೂಚನೆ ನೀಡಲಾಗಿದೆ.
ಆದರೆ ಕಾಂಗ್ರೆಸ್ ನ ಈ ಕಾರ್ಯ ತಂತ್ರಕ್ಕೆ ಅವಕಾಶ ನೀಡದೇ ಇರಲು ಬಿಜೆಪಿ ಯೋಜನೆ ರೂಪಿಸಿದೆ. ಮಧ್ಯಾಹ್ನ ಮೂರು ಗಂಟೆಯ ನಂತರವೂ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದರೆ ಅನಿರ್ದಿಷ್ಟಾವಧಿಯವರೆಗೆ ಸದನ ಮುಂದೂಡಲು ಸ್ಪೀಕರ್ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ