ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ಮುಂದುವರಿಸಿ ಅರ್ಜಿದಾರರ ಪರ ಹಲವು ವಕೀಲರ ವಾದ ಆಲಿಸಿ ಶುಕ್ರವಾರ ಮಧ್ಯಾಹ್ನಕ್ಕೆ ಮುಂದೂಡಿಕೆ ಮಾಡಿದೆ.
ಅರ್ಜಿದಾರರ ಪರ ವಕೀಲ ರಹಮತುಲ್ಲಾ ಕೊತ್ವಾಲ್ ವಾದ ಮಂಡನೆ ನಡೆಸಿ ಧರ್ಮ ಸ್ವಾತಂತ್ರ್ಯದ ಬಗ್ಗೆ ಪ್ರಶ್ನಿಸಿದರು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರದ ಕ್ರಮಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು.
ಉತ್ತರ ನೀಡಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಈ ಬಗ್ಗೆ ಸರಿಯಾದ ಅರ್ಜಿ ಸಲ್ಲಿಸಿಲ್ಲ, ಪೇಜ್ ನಂಬರ್ ಹಾಕಿಲ್ಲ. ಕೋರ್ಟ್ ಸಮಯ ವ್ಯರ್ಥ ಮಾಡಬೇಡಿ. ಅಂತರ್ ರಾಷ್ಟ್ರೀಯ ಒಪ್ಪಂದಗಳನ್ನು ತಪ್ಪಾಗಿ ಉಲ್ಲೇಖ ಮಾಡಿದ್ದಾರೆ. ನಿಯಮದಂತೆ ನೀವು ಪ್ರಮಾಣ ಪತ್ರ ಸಲ್ಲಿಸಿದ್ದೀರಾ ? ಎಂದು ಪ್ರಶ್ನೆ ಮಾಡಿದರು.
ನ್ಯಾಯ ಪೀಠದ ಪ್ರಶ್ನೆಗೆ ವಕೀಲ ಡಾ.ವಿನೋದ್ ಕುಲಕರ್ಣಿ ನಿಯಮದಂತೆ ನಾವು ಪ್ರಮಾಣ ಪತ್ರ ಸಲ್ಲಿಸಿದ್ದೇವೆ ಎಂದು ಉತ್ತರ ನೀಡಿದ್ದಾರೆ. ವಿವಾದದಿಂದ ಮುಸ್ಲಿಂ ಹೆಣ್ಣು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ವಿನೋದ್ ಕುಲಕರ್ಣಿ ವಾದ ಮಂಡನೆ ಮಾಡಿದ್ದಾರೆ. ಇಂದೇ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ವಿನೋದ್ ಕುಲಕರ್ಣಿ ನ್ಯಾಯಪೀಠಕ್ಕೆ ಮನವಿ ಮಾಡಿದರಾದರೂ ಪೀಠ ವಿಚಾರಣೆ ಮುಂದೂಡಿತು.
ವಕೀಲ ಎ.ಎಂ.ದಾರ್ ಅವರ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯ ಪೀಠ ಮತ್ತೆ ಕ್ರಮವಾಗಿ ಅರ್ಜಿ ಸಲ್ಲಿಸಲು ಹೇಳಿದೆ.ಯಾರ್ಯಾರೋ ವಾದ ಮಂಡನೆಗೆ ಬರುವುದು ಸರಿಯಲ್ಲ. ಇದುವರೆಗೆ ಸರಿಯಾದ ದಿಕ್ಕಿನಲ್ಲಿ ವಾದ ಮಂಡನೆಯಾಗಿದೆ ಎಂದು ನ್ಯಾಯ ಪೀಠ ಅಸಮಾಧಾನ ಹೊರ ಹಾಕಿದೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್