ಕುವೈತ್ ಸಿಟಿ | ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಶಿರ ವಸ್ತ್ರವನ್ನು ನಿಷೇಧಿಸಿರುವುದನ್ನು ಖಂಡಿಸಿ ಕುವೈತ್ ನ ಭಾರತೀಯ ರಾಯಭಾರಿ ಕಚೇರಿ ಮುಂಭಾಗದಲ್ಲಿ ಕುವೈತ್ ನ ಸರ್ವ ಧರ್ಮೀಯರು ಒಗ್ಗಟ್ಟಾಗಿ ಪ್ರತಿಭಟನೆ ನಡೆಸಿದರು. ಇಸ್ಲಾಮಿಕ್ ಸಾಂವಿಧಾನಿಕ ಚಳವಳಿಯ (ಹದಾಫ್) ಮಹಿಳೆಯರು ಪ್ರತಿಭಟನೆಯನ್ನು ಆಯೋಜಿಸಿದ್ದರು.
ಹಲವಾರು ಸ್ಥಳೀಯ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದು ಅಲ್-ಕಬಾಸ್ ದಿನಪತ್ರಿಕೆ ವರದಿ ಮಾಡಿದೆ. ಭಾರತೀಯ ರಾಯಭಾರಿ ಕಚೇರಿಯ ಮುಂಭಾಗದಲ್ಲಿರುವ ಗ್ರೀನ್ ಐಲ್ಯಾಂಡ್ ಸ್ಟ್ಯಾಂಡ್ನಲ್ಲಿ ಪ್ರತಿಭಟನಾಕಾರರು ಜಮಾಯಿಸಿದರು. ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತಮ್ಮ ಧ್ವನಿ ಮತ್ತು ಸಂದೇಶವನ್ನು ಭಾರತ ಸರ್ಕಾರಕ್ಕೆ ತಲುಪಿಸುವಂತೆ ಅವರು ಒತ್ತಾಯಿಸಿದರು.
ಭಾರತ-ಕುವೈತ್ ಸಂಬಂಧಗಳು ಪ್ರಾಚೀನ ಕಾಲದಿಂದಲೂ ಇವೆ. ಕುವೈತ್ನಲ್ಲಿ ವಿಶೇಷವಾಗಿ ವ್ಯಾಪಾರ ಸಹಕಾರದಲ್ಲಿ ಭಾರತೀಯ ಅತಿ ದೊಡ್ಡ ವಲಸಿಗ ಸಮುದಾಯವಾಗಿದೆ.ನಾವು ಭಾರತೀಯ ಸಮುದಾಯವನ್ನು ಗೌರವಿಸುತ್ತೇವೆ.ಅವರಲ್ಲಿ ಮುಸ್ಲಿಮೇತರೂ ಬಹಳಷ್ಟಿದ್ದಾರೆ. ಆದರೆ ನಾವು ಅವರನ್ನು ಇಸ್ಲಾಮಿಕ್ ಸಂಪ್ರದಾಯಗಳು ಮತ್ತು ನಂಬಿಕೆಗಳನ್ನು ಅನುಸರಿಸಲು ಒತ್ತಾಯಿಸುವುದಿಲ್ಲ. ಇಲ್ಲಿ ಅವರು ತಮ್ಮ ಧಾರ್ಮಿಕ ನಂಬಿಕೆಗಳು ಮತ್ತು ಆಚರಣೆಗಳನ್ನು ಆಚರಿಸಲು ಸ್ವತಂತ್ರರು.
ಅದೇ ರೀತಿ ಜಾತ್ಯತೀತ ರಾಷ್ಟ್ರ ಭಾರತದಲ್ಲಿ ಮುಸ್ಲಿಮರಿಗೆ ಮತ್ತು ಅವರ ಆಚರಣೆಗಳಿಗೆ ಪರಸ್ಪರ ಗೌರವ ಮತ್ತು ಸಹಕಾರವನ್ನು ನೀಡುವಂತೆ ಪ್ರತಿಭಟನಾಕಾರರು ಭಾರತ ಸರ್ಕಾರವನ್ನು ಒತ್ತಾಯಿಸಿದರು.

















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?