ಬೆಂಗಳೂರು,ಫೆ.21: ಶಿವಮೊಗ್ಗದಲ್ಲಿ ನಿನ್ನೆ ನಡೆದ ಹಿಂದೂ ಪರ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಹೇಳಿಕೆಯನ್ನು ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದಾರೆ.
ಮುಸಲ್ಮಾನ್ ಗೂಂಡಾಗಳಿಂದ ಹತ್ಯೆಯಾಗಿದೆ ಎಂಬ ಈಶ್ವರಪ್ಪ ಹೇಳಿಕೆ ಆರೋಪದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್, ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಈಶ್ವರಪ್ಪರ ಹೇಳಿಕೆ ಸರಿಯಲ್ಲ. ಇದು ಅಶಾಂತಿ ಸೃಷ್ಟಿಸುವ ಹೇಳಿಕೆ. ಇದು ಅವರ ಸ್ಥೂಲ ಕಲ್ಪನೆ. ಅಪರಾಧಿಗಳು ಯಾರು ಎಂಬುದು ಇನ್ನೂ ತನಿಖೆಯೇ ಆಗಿಲ್ಲ. ಆಗಲೇ ಕೋಮುಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈಶ್ವರಪ್ಪ ಅವರು ಜನರನ್ನು ದಾರಿ ತಪ್ಪಿಸಲು ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ನಾವು ರಾಜೀನಾಮೆ ಕೇಳುತ್ತಿದ್ದೇವೆ. ಅದನ್ನ ಅವರು ಕೊಡಲೇಬೇಕು. ಪೋಲಿಸರ ತನಿಖೆಯಾಗದೆ ಆಪಾದನೆ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಪೋಲಿಸರು ತನಿಖೆ ನಡೆಸುವುದು ಅವರ ಜವಾಬ್ದಾರಿ. ಇಂತಹ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಏನು ಮಾಡುತ್ತಿದೆ? ಡಿ.ಕೆ ಶಿವಕುಮಾರ್ ಮೇಲೆ ಆಪಾದನೆ ಮಾಡಿ ಏನೂ ಸಾಧಿಸಲಾಗದು. ಕ್ರಿಮಿನಲ್ ಹಿನ್ನೆಲೆಯುಳ್ಳವರೇ ಸಚಿವರಾಗಿದ್ದಾರೆ ಎಂದು ಸಚಿವ ಈಶ್ವರಪ್ಪ ಅವರಿಗೆ ಹರಿಪ್ರಸಾದ್ ತಿರುಗೇಟು ನೀಡಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)