ಅಬುಧಾಬಿ: ಯುಎಇಯ ಎಲ್ಲಾ ವಿಮಾನ ನಿಲ್ದಾಣಗಳಿಗೆ ಭಾರತದಿಂದ ಪ್ರಯಾಣಿಸುವವರಿಗೆ ರಾಪಿಡ್ ಪಿಸಿಆರ್ ಪರೀಕ್ಷೆಯನ್ನು ಮನ್ನಾ ಮಾಡಲಾಗಿದೆ. ಈ ಹಿಂದೆ ದುಬೈ, ಶಾರ್ಜಾ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ವಿನಾಯಿತಿಗಳನ್ನು ಘೋಷಿಸಲಾಗಿತ್ತು. ಆದರೆ, ರಾಸಲ್ ಖೈಮಾ ಮತ್ತು ಅಬುಧಾಬಿಗೂ ವಿನಾಯಿತಿ ಇರಲಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಸುತ್ತೋಲೆಯಲ್ಲಿ ತಿಳಿಸಿದೆ.
ಭಾರತದಿಂದ ಯುಎಇಗೆ ಪ್ರಯಾಣಿಸುವ ಪ್ರಯಾಣಿಕರು ನಿರ್ಗಮಿಸುವ ಮೊದಲು ಭಾರತೀಯ ವಿಮಾನ ನಿಲ್ದಾಣಗಳಲ್ಲಿನ ಕ್ಷಿಪ್ರ ಪಿಸಿಆರ್ ತಪಾಸಣೆಯನ್ನು ರದ್ದುಗೊಳಿಸಲಾಗಿದೆ, ಆದರೆ ಇತರ ಪ್ರಯಾಣದ ಷರತ್ತುಗಳನ್ನು ಪಾಲಸಬೇಕೆಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದೆ.
ಅಬುಧಾಬಿಯ ಅಧಿಕೃತ ವಿಮಾನಯಾನ ಸಂಸ್ಥೆಯಾದ ಇತ್ತಿಹಾದ್ ಕೂಡ ಕ್ಷಿಪ್ರ ಪಿಸಿಆರ್ ಪರೀಕ್ಷೆಯ ಅಗತ್ಯವನ್ನು ಕೈಬಿಡಲಾಗಿದೆ ಎಂದು ಪ್ರಕಟಿಸಿದೆ. ಆದಾಗ್ಯೂ, 48 ಗಂಟೆಗಳ ಒಳಗೆ ಆರ್ಟಿ ಪಿಸಿಆರ್ ಪರೀಕ್ಷೆಯ ಅವಶ್ಯಕತೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಪ್ರವಾಸದ ಆರು ಗಂಟೆಯೊಳಗೆ ರಾಪಿಡ್ ಪಿಸಿಆರ್ ಪರೀಕ್ಷೆಯು ಪ್ರಯಾಣಿಕರಿಗೆ ಬಿಕ್ಕಟ್ಟು ಸೃಷ್ಟಿಸಿತ್ತು. ಹೊರಗಿನ ಲ್ಯಾಬ್ಗಳ ಕೋವಿಡ್ ರಿಪೋರ್ಟ್ ನೆಗೆಟಿವ್ ಇದ್ದರೂ, ವಿಮಾನ ನಿಲ್ದಾಣದಲ್ಲಿನ ರಾಪಿಡ್ ಟೆಸ್ಟ್ನಲ್ಲಿ ಪಾಸಿಟಿವ್ ಆಗಿ ಪ್ರಯಾಣ ಮೊಟಕುಗೊಂಡ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿತ್ತು. ಇದೀಗ ಈ ಷರತ್ತನ್ನು ಕೈಬಿಡಲಾಗಿದ್ದು, ವಲಸಿಗರು ನಿಟ್ಟುಸಿರು ಬಿಡುವಂತಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ