ದೇರಳಕಟ್ಟೆ: ( ಫೆ 26 ) : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಪಕ್ಷದ ಕೈರಂಗಳ ಗ್ರಾಮ ಸಮಿತಿಯ ನೂತನ ಕಚೇರಿಯನ್ನು ಮೊಂಟುಗೋಳಿ ಪದಿಂಜಾರ್ ನಲ್ಲಿ ಎಸ್.ಡಿ.ಪಿ.ಐ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ ಉದ್ಘಾಟಿಸಿದರು.
ಆ ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿ ವಹಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ಕೆಸಿ ರೋಡ್ ಎಸ್ಡಿಪಿಐ ಪಕ್ಷ ಈ ದೇಶದ ದಲಿತ, ದಮನಿತ, ಅಲ್ಪಸಂಖ್ಯಾತರ ಏಳಿಗೆಗೆ ಶ್ರಮಿಸುತ್ತಿರುವ ಒಂದು ಸಾಮಾಜಿಕ ಚಳುವಳಿಯಾಗಿದೆ. ಇಂದು ದೇಶದಲ್ಲಿ ತಾಂಡವಾಡುತ್ತಿರುವ ಕೋಮುವಾದವನ್ನು ಎದುರಿಸುವಲ್ಲಿ ಎಸ್ಡಿಪಿಐ ಮುಂಚೂಣಿಯಲ್ಲಿದ್ದು ಪಕ್ಷ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ ಎಂದರು.
ಕ್ಷೇತ್ರ ಸಮಿತಿ ಸದಸ್ಯರೂ, ಮಂಜನಾಡಿ ಗ್ರಾಮ ಪಂಚಾಯಿತಿ ಸದಸ್ಯರೂ ಆದ ನೌಷಾದ್ ಕಲ್ಕಟ್ಟ ಮಾತನಾಡಿ ಕೈರಂಗಳ ಭಾಗದಲ್ಲಿ ಒಂದು ಸಮಯದಲ್ಲಿ ಪಕ್ಷ ಕಟ್ಟುವುದೇ ದುಸ್ತರವೆನಿಸುವಂತಹ ಸ್ಥಿತಿ ಇತ್ತು. ಆದರೆ ಈಗ ಪಕ್ಷದ ಬಗ್ಗೆ ಈ ಭಾಗದ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಈ ಭಾಗದ ಕಾರ್ಯಕರ್ತರು ಯಶಸ್ವಿಯಾಗಿದ್ದು ಇದರ ಪ್ರತಿಫಲವೇ ಇಂದು ಈ ಭಾಗದಲ್ಲಿ ಪಕ್ಷ ಇಷ್ಟು ಬಲಿಷ್ಠವಾಗಿರುವುದಕ್ಕೆ ಕಾರಣ ಎಂದರು.
ಸಮಾರಂಭದಲ್ಲಿ ಕ್ಷೇತ್ರ ಸಮಿತಿ ಸದಸ್ಯರಾದ ಸಲಾಂ ವಿದ್ಯಾನಗರ, ಸಜಿಪ ಇರಾ ಬ್ಲಾಕ್ ಅಧ್ಯಕ್ಷರಾದ ನವಾಝ್ ಸಜಿಪ, ಗ್ರಾಮ ಪಂಚಾಯತ್ ಸದಸ್ಯರಾದ ಶಾಕಿರ್ ಮೊಂಟೆಪದವು, ಪಕ್ಷದ ಪ್ರಮುಖರಾದ ಇಬ್ರಾಹಿಂ ಮೊಂಟುಗೋಳಿ, ಗ್ರಾಮದ ಹಿರಿಯರಾದ ಹಸೈನಾರ್ ಮತ್ತಿತರರು ಉಪಸ್ಥಿತರಿದ್ದರು. ಆಸಿಫ್ ಪದಿಂಜಾರ್ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್