ರಿಯಾದ್: ಲಸಿಕೆಯನ್ನು ಪೂರ್ಣಗೊಳಿಸದ ಕೋವಿಡ್ ರೋಗಿಗಳು 10 ದಿನಗಳವರೆಗೆ ಹೋಮ್ ಕ್ವಾರಂಟೈನ್ ಗೆ ಬದ್ಧರಾಗಿರಬೇಕು ಎಂದು ಸೌದಿ ಆರೋಗ್ಯ ಸಚಿವಾಲಯವು ಹೇಳಿದೆ. ಕೊನೆಯ ಮೂರು ದಿನಗಳಲ್ಲಿ ಔಷಧಿಯಿಲ್ಲದೆ ಜ್ವರ ವಾಸಿಯಾದರೆ ಮಾತ್ರ ಮತ್ತು ಇತರ ರೋಗಲಕ್ಷಣಗಳು ಕಡಿಮೆಯಾದರೆ ಮಾತ್ರ ಹತ್ತನೇ ದಿನಕ್ಕೆ ಕ್ವಾರಂಟೈನ್ ಅನ್ನು ಕೊನೆಗೊಳಿಸಬಹುದು ಎಂದು ಸಚಿವಾಲಯ ಹೇಳಿದೆ.
ಲಸಿಕೆಯನ್ನು ಪೂರ್ಣಗೊಳಿಸಿದವರಲ್ಲಿ ಕೋವಿಡ್ ಸೋಂಕು ದೃಢಪಟ್ಟರೆ, ಧನಾತ್ಮಕ ಮಾದರಿಯನ್ನು ತೆಗೆದುಕೊಂಡು ಏಳು ದಿನಗಳವರೆಗೆ ಹೋಮ್ ಕ್ವಾರಂಟೈನ್ ಅನುಸರಿಸಿದರೆ ಸಾಕು. ಇವರಿಗೆ ಕೊನೆಯ 24 ಗಂಟೆಗಳ ಕಾಲ ಔಷಧಿಗಳನ್ನು ತೆಗೆದುಕೊಳ್ಳದೆ ಜ್ವರದ ಯಾವುದೇ ಲಕ್ಷಣಗಳನ್ನು ಹೊಂದಿರಬಾರದು ಮತ್ತು ಇತರ ಕೋವಿಡ್ ರೋಗಲಕ್ಷಣಗಳು ಕಡಿಮೆಯಾಗಿಅರಬೇಕು. ಕ್ವಾರಂಟೈನ್ ಅವಧಿಯು ಮುಗಿದು, ರೋಗಮುಕ್ತಿ ಪರಿಸ್ಥಿತಿಗಳನ್ನು ಸಾಧಿಸಿದ ನಂತರ ಪಿಸಿಆರ್ ಪರೀಕ್ಷೆಯನ್ನು ದೃಢೀಕರಿಸುವ ಅಗತ್ಯವಿಲ್ಲ. ರೋಗ ವಾಸಿಯಾದ ಕೂಡಲೇ ಪ್ರಾಥಮಿಕ ಲಸಿಕೆ ಮತ್ತು ಬೂಸ್ಟರ್ ಡೋಸ್ ತೆಗೆದುಕೊಳ್ಳಬಹುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ