
ಉಡುಪಿ : ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್‌ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಹುತಾತ್ಮರ ಸ್ಮಾರಕ, ಅಜ್ಜರಕಾಡಿನಲ್ಲಿ ಮೊಂಬತ್ತಿ ಪ್ರತಿಭಟನೆ ನಡೆಯಿತು.
ನಮ್ಮ ದೇಶದ ಹಲವಾರು ವಿದ್ಯಾರ್ಥಿಗಳು ಉನ್ನತ ವಿದ್ಯಾರ್ಜನೆಗಾಗಿ ತೆರಳಿ ಸಿಲುಕಿದ್ದಾರೆ,ರಕ್ಷಣೆಗಾಗಿ ಭಾರತದ ರಾಯಭಾರಿ ಕಚೇರಿ ಮತ್ತು ಪ್ರಧಾನಿ, ಸಚಿವರನ್ನು ಪರಿಪರಿಯಾಗಿ ವಿನಂತಿಸುತ್ತಿದ್ದರೂ ಇನ್ನೂ ಕೂಡ ಯುದ್ದಪೀಡಿತ ರಾಷ್ಟ್ರದಲ್ಲಿ ಜೀವಭಯದಿಂದ ಕಂಗಾಲಾಗಿದ್ದಾರೆ. ಆ ಪೈಕಿ ರಾಜ್ಯದ ನವೀನ್ ಎಂಬ ವಿದ್ಯಾರ್ಥಿ ರಷ್ಯಾದ ರಾಕೆಟ್ ದಾಳಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಪ್ರಜೆಗಳ ರಕ್ಷಿಸುವಲ್ಲಿ ವಿಫಲವಾಗಿದೆ.
ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕದನ ಪೀಡಿತ ರಾಷ್ಟ್ರಗಳಿಂದ ವಿದ್ಯಾರ್ಥಿಗಳು ಸಹಿತ ಎಲ್ಲರನ್ನೂ ರಕ್ಷಣೆ ಮಾಡಬೇಕು. ದೇಶದ ಜನರು ವಿದೇಶಗಳಲ್ಲಿ ಜೀವದ ಅಪಾಯವನ್ನೆದುರಿಸುವಾಗ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸದೆ ಬೇಜವಾಬ್ದಾರಿಯಿಂದ ವರ್ತಿಸುವ ಪರಿಣಾಮವೇ ಕರ್ನಾಟಕ ಇಂದು ಒಂದು ಅಮೂಲ್ಯ ಜೀವವನ್ನು ಕಳೆದುಕೊಂಡಿದೆ. ಮೃತಪಟ್ಟ ವಿದ್ಯಾರ್ಥಿಯ ಕುಟುಂಬಕ್ಕೆ ತಕ್ಷಣವೇ ಪರಿಹಾರ ಘೋಷಣೆ ಮಾಡಬೇಕು ಎಂದು ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ನವಾಝ್ ಶೇಖ್ ಆಗ್ರಹಿಸಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಅಧ್ಯಕ್ಷರು ಅಸೀಲ್ ಅಕ್ರಮ್,ಜಿಲ್ಲಾ ಕಾರ್ಯದರ್ಶಿ ಸಾದಿಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬೆಳ್ತಂಗಡಿ
ಬೆಳ್ತಂಗಡಿ : ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್‌ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೊಂಬತ್ತಿ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ನಾಯಕರಾದ ನಾಸಿರ್ ಬಂಗೇರಕಟ್ಟೆ ,ಭಾಕಿರ್ ಪುಂಜಾಲಕಟ್ಟೆ ,ಸಹಲ್ ನೀರ್ಸಾಲ್ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ