ಮಂಗಳೂರು: ಹಿಜಾಬ್ ಧರಿಸಿದ್ದ ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಬೆದರಿಸಿ ಹಲ್ಲೆ ಮಾಡಲು ಮುಂದಾದ ಕಾರ್ ಸ್ಟ್ರೀಟ್ ಕಾಲೇಜಿನ ವಿದ್ಯಾರ್ಥಿ ದಯಾನಂದ ಪೈ ಹಾಗೂ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳ ದುಷ್ಕೃತ್ಯದ ವಿಡಿಯೋವೊಂದು ಇಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಈ ಸಂದರ್ಭದಲ್ಲಿ ಎಚ್ಚೆತ್ತುಕೊಂಡ ಮುಸ್ಲಿಂ ಐಕ್ಯತಾ ವೇದಿಕೆಯ ಕುದ್ರೋಳಿ ನಿಯೋಗವು ಬಂದರ್ ಪೋಲಿಸ್ ಠಾಣೆಗೆ ಭೇಟಿ ನೀಡಿದ ವೇಳೆಯಲ್ಲಿ, ಬೆದರಿಕೆಗೊಳಗಾದ ವಿದ್ಯಾರ್ಥಿನಿಯರು ದೂರು ದಾಖಲು ಮಾಡಲು ಬಂದರ್ ಠಾಣೆಯಲ್ಲಿ ಮೂರು ಘಂಟೆಗಳ ಕಾಲ ಕಾಯುತಿದ್ದ ಪ್ರಸಂಗ ಬೆಳಕಿಗೆ ಬಂದಿದೆ.
ಕೂಡಲೇ ಮಧ್ಯಪ್ರವೇಶಿಸಿ ದೂರು ದಾಖಲಿಸುವಂತೆ ಮಾತುಕತೆ ನಡೆಸುತ್ತಿದ್ದಂತೆ, ಅಲ್ಲಿಗೆ ಮಂಗಳೂರು ಕಮಿಷನರ್ ಎನ್ ಶಶಿಕುಮಾರ್ ಆಗಮಿಸುತ್ತಾರೆಂಬ ಮಾಹಿತಿ ದೊರೆತಿದ್ದು, ತಕ್ಷಣವೇ ಪೊಲೀಸ್ ಅಧಿಕಾರಿಗಳು ಕಾರ್ಯಪ್ರವರ್ತರಾಗಿ, ವಿದ್ಯಾರ್ಥಿನಿಯರನ್ನು ವಿಚಾರಿಸಿ, ದೂರು ಸ್ವೀಕರಿಸುವಂತೆ ಎಸಿಪಿ ಸೂಚಿಸಿದ್ದಾರೆ.
ನಂತರ ಮಾದ್ಯಮದೊಂದಿಗೆ ಐಕ್ಯತಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಬಿ ಅಬೂಬಕ್ಕರ್ ರವರು ಮಾಹಿತಿ ನೀಡುತ್ತಾ, ಕೂಡಲೇ ಅನ್ಯಾಯಕ್ಕೊಳಗಾದ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸಿ ಕೊಡುವಂತೆ ಕಮಿಷನರಲ್ಲಿ ವಿನಂತಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಮಾಜಿ ಅಧ್ಯಕ್ಷರಾದ ಕೆ ಆಶ್ರಫ್ ಮಾಜಿ ಮೇಯರ್ ಮಾತನಾಡಿ, ಇಂತಹ ಸೂಕ್ಷ್ಮ ವಿಷಯಗಳು ಬಿಗಡಾಯಿಸದಂತೆ ಎಲ್ಲಾ ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕರು ಕಾರ್ಯೋನ್ಮುಖರಾಗಬೇಕು.ಈ ವಿಷಯದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಮುಸ್ಲಿಂ ಐಕ್ಯತಾ ವೇದಿಕೆಯ ಅಧ್ಯಕ್ಷರಾದ ಯಾಸೀನ್ ಕುದ್ರೋಳಿ, ಕಾರ್ಪೋರೇಟರ್ ಶಂಸುದ್ದೀನ್ ಎಚ್ ಬಿಟಿ ,ಕೋಶಾಧಿಕಾರಿ ಮಕ್ಬೂಲ್ ಜಾಮಿಅ, ವೇದಿಕೆಯ ಸಂಚಾಲಕರಾದ ಅಝೀಝ್ ಕುದ್ರೋಳಿ, ಮುಝೈರ್ ಕುದ್ರೋಳಿ,ಲತೀಫ್ ಕ್ರಿಸ್ಟಲ್ ನಿಯೋಗದಲ್ಲಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ