ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆ 2 ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಅಂತರಾಷ್ಟ್ರೀಯ ವಿಮಾನಯಾನಗಳ ಹಾರಾಟ ಮಾರ್ಚ್ 27 ರಿಂದ ಪುನರಾರಂಭಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಸಿದ್ಧತೆ ನಡೆಸಿದೆ.
ಜಾಗತಿಕವಾಗಿ ಕೋವಿಡ್ ಪ್ರಕರಣಗಳು ಪತ್ತೆಯಾದಾಗ ಮಾರ್ಚ್ 23, 2020 ರಂದು ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಲಾಯಿತು. ಕೇಂದ್ರವು ಹಿಂದಿನ ಸಂದರ್ಭಗಳಲ್ಲಿ ಅಂತರರಾಷ್ಟ್ರೀಯ ವಿಮಾನಯಾನವನ್ನು ಪುನರಾರಂಭಿಸಲು ಪ್ರಯತ್ನಿಸಿತ್ತು. ಆದರೆ ಏರುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ ಕೇಂದ್ರ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿತ್ತು.
ಡಿಸೆಂಬರ್ 15, 2021 ರಿಂದ ಕ್ರಮೇಣ ಪುನರಾರರಂಭಿಸುವುದಾಗಿ ಘೋಷಿಸಿತು. ಆದರೆ ಓಮಿಕ್ರಾನ್ ಕೋವಿಡ್ ರೂಪಾಂತರದ ಪ್ರಾರಂಭದಿಂದಾಗಿ ವಿಮಾನ ಹಾರಾಟದ ದಿನಾಂಕವನ್ನು ಮುಂದೂಡಲಾಗಿತ್ತು. ಮಾರ್ಚ್ 15 ರಿಂದ ವಿಮಾನಗಳನ್ನು ಪುನರಾರಂಭಿಸಲು ಮಾತುಕತೆಗಳು ನಡೆಯುತ್ತಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ ಸರ್ಕಾರವು ಮುಂದಿನ ಆದೇಶದವರೆಗೆ ವಿಮಾನ ನಿಷೇಧವನ್ನು ವಿಸ್ತರಿಸಲು ಒತ್ತಾಯಿಸಿತು.
ಸದ್ಯಕ್ಕೆ ಕೆಲವು ವಿದೇಶ ರಾಷ್ಟ್ರಗಳಿಂದ ಏರ್ ಬಬಲ್ ಒಪ್ಪಂದದ ಅಡಿಯಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ನಡೆಸಲಾಗುತ್ತಿದೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್