ಮಂಗಳೂರು: ಹಿಜಾಬ್ ಇಸ್ಲಾಮಿನ ಅತ್ಯಗತ್ಯ ಭಾಗವಲ್ಲವೆಂದು ಹೈಕೋರ್ಟ್ ನೀಡಿರುವ ತೀರ್ಪು ಇಸ್ಲಾಮೀ ಪ್ರಮಾಣಗಳನ್ನು ಅವಲಂಬಿತಗೊಂಡಿಲ್ಲವೆಂದು ಸುನ್ನೀ ಜಮ್ಇಯ್ಯತುಲ್ ಉಲಮಾ ಅಭಿಪ್ರಾಯಪಟ್ಟಿದೆ.
ಮಹಿಳೆಯರಿಗೆ ಹಿಜಾಬ್ ಕಡ್ಡಾಯ ಎನ್ನುವುದು ಖುರ್ಆನ್ ಮತ್ತು ಪ್ರವಾದಿ ವಚನಗಳ ಆದೇಶಗಳಲ್ಲಿ ಸಂಶಯಾತೀತವಾಗಿ ದಾಖಲೆ ಗೊಂಡಿದ್ದು ಜಾಗತಿಕ ಮಟ್ಟದಲ್ಲಿ ಹಿಜಾಬನ್ನು ಮುಸ್ಲಿಮ್ ಮಹಿಳೆಯರ ಸಂಕೇತವಾಗಿ ಕಾಣಲಾಗುತ್ತಿದೆ.ಇಂತಹ ಸ್ಪಷ್ಟ ವಿಷಯಗಳ ಬಗ್ಗೆ ನ್ಯಾಯಾಲಯವು ಮೇಲಿನ ತೀರ್ಪನ್ನು ನೀಡಿರುವುದು ಅಚ್ಚರಿಯನ್ನು ಹುಟ್ಟಿಸಿದೆ.
ತೀರ್ಪಿನ ಬಗ್ಗೆ ವಿದ್ವಾಂಸ ಒಕ್ಕೂಟವು ಅಧ್ಯಯನ ನಡೆಸಿ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸುನ್ನೀ ಜಮ್ಇಯ್ಯತುಲ್ ಉಲಮಾ ಕರ್ನಾಟಕ ಅಧ್ಯಕ್ಷ ಝೈನುಲ್ ಉಲಮಾ ಖಾಝಿ ಎಮ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರಕಟನೆಯಲ್ಲಿ ತಿಳಿಸಿದರು.
ಹೈಕೋರ್ಟ್ ತೀರ್ಪು ನಿರಾಶೆ ತಂದಿದೆ- ಎಸ್ ವೈ ಎಸ್
ಹಿಜಾಬ್ ಕುರಿತು ಕೋರ್ಟ್ ಹೇಳಿಕೆ ಖುರ್ಆನಿನ ಆದೇಶಕ್ಕೆ ವಿರುದ್ಧ, ಹಿಜಾಬ್ ಮುಸ್ಲಿಂ ಮಹಿಳೆಯರಿಗೆ ಇಸ್ಲಾಂ ಕಡ್ಡಾಯಗೊಳಿಸಿದೆ.
ಕಾನೂನು ಹೋರಾಟ ಮುಂದುವರಿಯಲಿದ್ದು ಮುಂದಿನ ತೀರ್ಪುಗಳಲ್ಲಿ ನ್ಯಾಯ ದೊರಕುವ ಭರವಸೆಯಿದೆ ಎಂದು ಕರ್ನಾಟಕ ರಾಜ್ಯ ಎಸ್ ವೈ ಎಸ್ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ