ಬೆಂಗಳೂರು,ಮಾರ್ಚ್.20: ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪಿಗಳನ್ನು ರಾಜ್ಯದ ವಶಕ್ಕೆ ಪಡೆಯಬೇಕು ಹಾಗೂ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪೊಲೀಸರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಹಿಜಾಬ್ ವಿಚಾರವಾಗಿ ತೀರ್ಪು ನೀಡಿದ್ದಕ್ಕೆ ಹೈಕೋರ್ಟ್ ನ್ಯಾಯಾಧೀಶರ ಮೇಲೆ ತಮಿಳುನಾಡಿನಲ್ಲಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಈ ಕುರಿತು ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಎಲ್ಲ ಅವಕಾಶ ಇದೆ. ಆದ್ರೆ, ಒಂದು ವ್ಯವಸ್ಥೆಗೆ ಬೆದರಿಕೆ ಹಾಕುವ ಕೆಲಸ ಆಗಿದೆ. ವ್ಯವಸ್ಥೆ ವಿರುದ್ಧ ಎತ್ತಿ ಕಟ್ಟುವ ಕೆಲಸ ನಡೆಯುತ್ತಿದೆ. ಇದನ್ನು ದಮನ ಮಾಡಬೇಕಿದೆ. ತಮಿಳುನಾಡಿನಲ್ಲಿ ಪ್ರಕರಣ ದಾಖಲಾಗಿದ್ದು, ನಿನ್ನೆ ಬಾರ್ ಕೌನ್ಸಿಲ್ ನವರು ಬಂದು ದೂರು ನೀಡಿದ್ದಾರೆ. ಆರೋಪಿಗಳನ್ನು ನಮ್ಮ ರಾಜ್ಯದ ವಶಕ್ಕೆ ತೆಗೆದಕೊಳ್ಳಬೇಕು. ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಯಾವೆಲ್ಲ ಸೆಕ್ಷನ್ ಹಾಕಬೇಕು ಅದನ್ನು ಹಾಕಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.
ಬೆದರಿಕೆ ಬಂದ ಹಿನ್ನೆಲೆಯಲ್ಲಿ ಜಡ್ಜ್ ಗೆ ವೈ ಭದ್ರತೆ ನೀಡಬೇಕು ಅಂತ ತೀರ್ಮಾನ ಮಾಡಿದ್ದೇವೆ. ಈ ಘಟನೆ ನಡೆದ ಮೂರು ದಿನ ಆಗಿದ್ರೂ ಸಹ ಜ್ಯಾತ್ಯಾತೀತವಾದಿಗಳು ಮೌನವಾಗಿದ್ದಾರೆ. ಒಂದು ವರ್ಗದ ಜನರನ್ನು ಹೆಚ್ಚು ಒಲೈಕೆ ಮಾಡ್ತಿರುವುದು ನಿಜವಾದ ಕೋಮುವಾದ. ಪ್ರಜಾಪ್ರಭುತ್ವವನ್ನು ನಾವೂ ಎತ್ತಿ ಹಿಡಿಯುತ್ತೇವೆ. ಸರ್ಕಾರ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?