ತಲಪಾಡಿ ( ಮಾ 21 ) : ತಲಪಾಡಿ ಗ್ರಾಮದ 1,2,3,4 ನೇ ವಾರ್ಡಿಗೆ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ನಾಗರೀಕ ಸಮಿತಿಯ ನೇತೃತ್ವದಲ್ಲಿ ಸಾರ್ವಜನಿಕರು ಇಂದು ತಲಪಾಡಿ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಗ್ರಾಮ ಸಮಿತಿ ಅಧ್ಯಕ್ಷರಾದ ಇಮ್ರಾನ್ ಪೂಮಣ್ಣು ಮುತ್ತಿಗೆಯ ನೇತೃತ್ವ ವಹಿಸಿದ್ದರು. ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಸಿದ್ದೀಕ್ ತಲಪಾಡಿ ಮತ್ತು ಎಸ್.ಡಿ.ಪಿ.ಐ ನ ಹಕೀಮ್ ಕೆಸಿ ನಗರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.
ಒಂದು ವಾರದ ಹಿಂದೆ ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ಗಡುವು ನಿಗದಿಪಡಿಸಿ ಮನವಿ ಸಲ್ಲಿಸಿ ನೀರು ಸರಬರಾಜು ಮಾಡುವಂತೆ ಒತ್ತಾಯಿಸಲಾಗಿತ್ತು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಇಂದು ಮುತ್ತಿಗೆ ಹಾಕಲಾಯಿತು.
ಪ್ರತಿಭಟನಾಕಾರರ ಜೊತೆ ಮಾತನಾಡಿದ ಪಂಚಾಯತ್ ಅಧಿಕಾರಿಗಳು ಇಂದಿನಿಂದಲೇ ನೀರು ಸರಬರಾಜು ಆರಂಭಿಸುವ ಬಗ್ಗೆ ಸ್ಪಷ್ಟನೆ ಕೊಟ್ಟ ಹಿನ್ನೆಲೆಯಲ್ಲಿ ಮುತ್ತಿಗೆ ಕೈ ಬಿಡಲಾಯಿತು.
ಮುತ್ತಿಗೆ ಕಾರ್ಯಕ್ರಮದಲ್ಲಿ SDPI ಗ್ರಾಮ ಸಮಿತಿಯ ಕಾರ್ಯದರ್ಶಿ ರಶೀದ್ ಇಂಜಿನಿಯರ್, ಮುಖಂಡರಾದ ಮೊಯ್ದಿನ್ ಉಚ್ಚಿಲ್, ಹಾರೂನ್, ಅಂದು, ಬಶೀರ್ , ಅಬ್ದುಲ್ಲಾ, ಸಿನಾನ್ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ