ಬೆಂಗಳೂರು: ಹಿಜಾಬ್ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ.
ಪಬ್ಲಿಕ್ ಟಿವಿ ಫೆಬ್ರವರಿ 3ರಂದು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ, ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯ ಕಾರ್ಯಕ್ರಮದಲ್ಲಿ ಎಚ್.ಆರ್. ರಂಗನಾಥ್ ಹಾಗೂ ಅರುಣ್ ಬಡಿಗರ್ ಅವರು ಮತನಾಡುತ್ತಾ, ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದು ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.
ಈ ಹೇಳಿಕೆಯನ್ನು ವಿರೋಧಿಸಿ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ವಿವಾದಾತ್ಮಕ ಹೇಳಿಕೆ ಮೂಲಕ ನಿರೂಪಕರಿಬ್ಬರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಮಾಡಿದ್ದು, ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ವಿವಾದಾತ್ಮಕ ಹೇಳಿಕೆಯ ವಿರುದ್ಧ ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಅವರ ದೂರನ್ನು ಪರಿಗಣಿಸಿದ ನ್ಯಾಯಾಲಯವು ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ), 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ