ಮೂಡುಬಿದಿರೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದಲ್ಲಿ ಮಹತ್ತರವಾದ ಒಂದು ಹಂತವಾಗಿದ್ದು ಯಾರೂ ಪರೀಕ್ಷೆಗಳನ್ನು ಕಳೆದುಕೊಳ್ಳಬಾರದು. ಗರಿಷ್ಠ ಅನುಕೂಲತೆಗಳನ್ನು ಬಳಸಿ ಪರೀಕ್ಷೆಗೆ ಹಾಜರಾಗಬೇಕು. ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣ ಇತ್ಯರ್ಥಗೊಂಡು ಶೀಘ್ರವಾಗಿ ನಮಗೆ ನ್ಯಾಯ ಸಿಗುವ ಭರವಸೆಯಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ರಾಜ್ಯದ ವಿವಿಧ ಕಡೆಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಧ್ಯೆ ಮೂಡುಬಿದಿರೆ ಝಿಕ್ರಾ ಅಕಾಡೆಮಿಯಲ್ಲಿ ಏರ್ಪಡಿಸಿದ್ದ ಸಮಾವೇಶದಲ್ಲಿ ಕಾಂತಪುರಂ ಉಸ್ತಾದರು ಸಲಹೆ ನೀಡಿದರು.
ಮುಸ್ಲಿಂ ಹೆಣ್ಮಕ್ಕಳಿಗೆ ಶಾಲ-ಕಾಲೇಜು ತರಗತಿ ಕೊಠಡಿಗಳಲ್ಲಿ ಹಿಜಾಬ್ ನಿರ್ಬಂಧಿಸಿ ಕರ್ನಾಟಕ ಹೈ ಕೋರ್ಟ್ ನಿಂದ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಸಮುದಾಯದೊಳಗೆ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗುವ ಹಂತಕ್ಕೆ ಬಂದು ನಿಂತಿದೆ.
ಈ ನಿಟ್ಟಿನಲ್ಲಿ ನಾವು ಸರಕಾರ ಮತ್ತು ನ್ಯಾಯಾಲಯದೊಂದಿಗೆ ಸಂಘರ್ಷಕ್ಕೆ ನಿಲ್ಲುವುದಿಲ್ಲ. ಸರಕಾರ ಮತ್ತು ನ್ಯಾಯಾಲಯದ ಕಡೆಯಿಂದ ಗೊಂದಲಕ್ಕೆ ತೆರೆ ಎಳೆದು ತಕ್ಷಣ ಸಂಧಾನದ ಮೂಲಕ ಸರ್ವರಿಗೂ ಸಮ್ಮತ ವಾಗುವ ರೀತಿಯ ಕ್ರಮವನ್ನು ನಿರೀಕ್ಷೆ ಮಾಡುವುದಾಗಿ ಅವರು ಹೇಳಿದರು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗಲು ನಾವು ನಿರ್ಧರಿಸಿದ್ದೇವೆ. ಮರ್ಕಝ್ ಲಾ ಕಾಲೇಜಿನ ತಜ್ಞ ವಕೀಲರ ತಂಡ ಈ ಬಗ್ಗೆ ಕಾರ್ಯ ಪ್ರವೃತ್ತವಾಗಿದೆ. ಹಿಜಾಬ್ ವಿಚಾರವನ್ನು ಕಾನೂನಿನ ಮೂಲಕ ಎದುರಿಸಲು ಅವಕಾಶ ಮುಕ್ತವಾಗಿದೆ. ಆ ಬಗ್ಗೆ ಸಂವಿಧಾನ ನೀಡಿದ ಅವಕಾಶವನ್ನು ಬಳಸಿ ನಾವು ಮುಂದಡಿ ಇಡುತ್ತೇವೆ ಎಂದು ಅವರು ಸ್ಪಷ್ಟ ಪಡಿಸಿದರು.
ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿ ಪಡಿಸುವ ಬಲಿಷ್ಠ ಸಂವಿಧಾನ ಹೊಂದಿರುವ ಭಾರತದಲ್ಲಿ ಸಾಮರಸ್ಯ ಮತ್ತು ಸಹಿಷ್ಣುತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳುವುದು ದೇಶದ ಎಲ್ಲ ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಹೇಳಿದರು.
ಸಮಾವೇಶದಲ್ಲಿ ಸಯ್ಯದ್ ಸಾದಾತ್ ತಂಜಳ್ ಗುರುವಾಯನಕೆರೆ, ಎಸ್.ವೈ.ಎಸ್.ಕರ್ನಾಟಕ ರಾಜ್ಯಾಧ್ಯಕ್ಷ ಡಾ.ಎಮ್ಮೆಸ್ಸೆಂ ಝನೀ ಕಾಮಿಲ್, ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಟ, ಕೆಕೆಎಂ ಕಾಮಿಲ್ ಸಖಾಫಿ ಕೃಷ್ಣಾಪುರ ಮುಂತಾದವರು ಮಾತನಾಡಿದರು.ಝಿಕ್ರಾ ಅಕಾಡೆಮಿ ಅಧ್ಯಕ್ಷ ನೌಫಲ್ ಸಖಾಫಿ ಕಳಸ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ