ರಿಯಾದ್: ಇಲ್ಲಿನ ಬಟ್ಟೆ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ನಿವಾಸಿ, ಕಾಂಗ್ರೆಸ್ ಮುಖಂಡ ಎಮ್.ಎಚ್.ಹಮೀದ್ ಅವರ ಮೇಲೆ ನಾಲ್ವರ ಗುಂಪೊಂದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ಇತ್ತೀಚೆಗೆ ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ ಬಗ್ಗೆ ಎಸ್ಡಿಪಿಐ ಪಕ್ಷದ ರಾಜಕೀಯ ನಡೆಯನ್ನು ಪ್ರಶ್ನಿಸಿ ಹಮೀದ್ ರವರು ವಾಟ್ಸಾಪ್ ಗ್ರೂಪ್ ಒಂದರಲ್ಲಿ ವಾಯ್ಸ್ ಬಿಟ್ಟ ವಿಚಾರವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ನಿನ್ನೆ ತಡ ರಾತ್ರಿ ಅಂಗಡಿ ಮುಚ್ಚಿ ತನ್ನ ಸಹೋದ್ಯೋಗಿಯೊಂದಿಗೆ ರೂಮ್ ಕಡೆ ತೆರಳುತ್ತಿದ್ದ ಸಂಧರ್ಭದಲ್ಲಿ ಹೊಂಚು ಹಾಕಿ ಕುಳಿತಿದ್ದ ಎಸ್ಡಿಪಿಐ ಕಾರ್ಯಕರ್ತರು ಎನ್ನಲಾದ ನಾಲ್ವರು ಹಮೀದ್ ಅವರ ಮೇಲೆ ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ತಡೆಯಲು ತಡೆಯಲು ಯತ್ನಿಸಿದ ಸಹೋದ್ಯೋಗಿ ಮೇಲೂ ತಂಡ ಹಲ್ಲೆ ನಡೆಸಿದೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿ ಸೌದಿ, ರಿಯಾದ್ ಪೋಲಿಸರ ವಶದಲ್ಲಿದ್ದು, ಮಿಕ್ಕ ಮೂವರು ಆರೋಪಿಗಳಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ