ದುಬೈ: ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯವಿದ್ರಾವಕ ಘಟನೆಯೊಂದು ಭಾರತದ ಕಾಶ್ಮೀರದಲ್ಲಿ ನಡೆದಿರುವುದು ಖಂಡನೀಯ.
ಜಮ್ಮು ಕಾಶ್ಮೀರದ ಕಾಥುವಾ ಎಂಬಲ್ಲಿ ಎಂಟು ವರ್ಷ ಪ್ರಾಯದ ಆಸಿಫಾ ಎಂಬ ಮುಗ್ದ ಬಾಲಕಿಯನ್ನು ಅಪಹರಿಸಿ ಬಾಲಾಪರಾಧಿ ಸಹಿತ ಉನ್ನತ ಪೋಲೀಸ್ ಅಧಿಕಾರಿಗಳನ್ನೊಳಗೊಂಡು ನಾಲ್ಕು ಜನರ ತಂಡವು ಏಳು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆಯು ಭಾರತವನ್ನು ತಲೆತಗ್ಗಿಸುವಂತೆ ಮಾಡಿದೆ.
ತನ್ನ ಗ್ರಾಮದಲ್ಲಿನ ಕಾಡು ಪ್ರದೇಶಕ್ಕೆ ಕುದುರೆಯನ್ನು ಮೇಯಿಸಲು ಹೋಗಿದ್ದ ಆಸಿಫಾಳನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆಗೈದ ಕಾಮ-ನರ ಪಿಶಾಚಿಗಳು ಮಾನವ ಸಮೂಹಕ್ಕೆ ಕಂಠಕ. ಪವಿತ್ರ ಆರಾಧನಾಲಯದಲ್ಲಿ ಆ ಮುಗ್ದ ಮಗುವನ್ನು ಸತತ ಏಳು ದಿನಗಳ ಕಾಲ ನಿದ್ದೆ ಮಾತ್ರೆ ನೀಡಿ , ಆಹಾರ ನೀಡದೆ ದೈಹಿಕವಾಗಿ ಕಿರುಕುಳ ನೀಡಿ ಸಾಮೂಹಿಕವಾಗಿ ಅತ್ಯಾಚಾರಗೈದು ಮೃಗೀಯವಾಗಿ ಕೊಲೆಗೈದ ಕಿರಾತಕರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿ ಕೂಡಲೇ ನೇಣುಗಂಬಕ್ಕೆ ಏರಿಸುವಂತೆ ಸರ್ವ ಭಾರತೀಯರ ಅಭಿಲಾಷೆಯೂ, ಒತ್ತಾಯವೂ ಆಗಿದೆ.
ಈ ನಿಟ್ಟಿನಲ್ಲಿ ಕೆಸಿಎಫ್ ಯುಎಇ ಯು ತೀವ್ರ ಸಂತಾಪ ವ್ಯಕ್ತಪಡಿಸಿ ಆಸಿಫಾಲ ಪಾರತ್ರಿಕ ಮೋಕ್ಷಕ್ಕಾಗಿ ಹಾಗೂ ಆಕೆಯ ಕುಟುಂಬಕ್ಕೆ ಕ್ಷಮೆ ನೀಡಲು ಪ್ರಾರ್ಥಿಸಿ ನರ-ಕಾಮ ಪಿಶಾಚಿ ಕುಟುಕರಿಗೆ ಅತೀ ಶೀಘ್ರವಾಗಿ ಶಿಕ್ಷೆಯನ್ನು ವಿಧಿಸುವಂತಾಗಲಿ ಎಂದು ಪ್ರಾರ್ಥಿಸಿದರು.
ನರ ಹಂತಕರಿಗೆ ಸಾಥ್ ನೀಡುವ ಶಕ್ತಿಗಳನ್ನು ತರಾಟೆಗೆ ತೆಗೆದ ಕೆಸಿಎಫ್ ಯುಎಇ ಶೀಘ್ರವೇ ನರಹಂತಕರು ನೇಣುಗಂಬಕ್ಕೆ ಏರುವಂತಾಗಲಿ ಎಂದು ಆಶಿಸಿತು.
ಆಸಿಫಾ ಪ್ರಕರಣವು ಇಡೀ ಮಾನವ ಕುಲವೇ ತಲೆತಗ್ಗಿಸುವಂತಹ ಪ್ರಕರಣವಾಗಿದೆ. ಇದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಕೆಸಿಎಫ್ ಯುಎಇ ಆಸಿಫಾಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಭಾರತ ಸರಕಾರದಲ್ಲಿ ಮನವಿ ಮಾಡಿಕೊಂಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ