ಮಂಗಳೂರು : ನಿಯಮ ಮೀರಿ ಧ್ವನಿವರ್ಧಕ ಬಳಕೆಗೆ ತಡೆಯಲು ಮಂಗಳೂರು ನಗರದಲ್ಲಿ 1001 ಸ್ಥಳಗಳಿಗೆ ನೋಟೀಸು ನೀಡಲಾಗಿದೆ ಎಂದು ಕಮಿಷನರ್ ಎನ್ .ಶಶಿಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ 357 ದೇವಸ್ಥಾನ, ಮಸೀದಿ 168, ಚರ್ಚ್ 95,106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳ ಗಳು, 98 ಮನರಂಜನಾ ಸ್ಥಳ ಸೇರಿದಂತೆ 1001 ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿರುವುದನ್ನು ಈಗಾಗಲೇ ಗುರುತಿಸಲಾಗಿದ್ದು, ನಿನ್ನೆಯಿಂದ ನೋಟೀಸು ನೀಡುವ ಕ್ರಮ ಆರಂಭಿಸಲಾಗಿದೆ. ವಿವಿಧ ಸ್ಥಳ ಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಯಮವಿದ್ದು, ಬೆಳಗ್ಗೆ ಮತ್ತು ಸಂಜೆ ಹೊತ್ತು ಧ್ವನಿವರ್ಧಕದ ಶಬ್ಧ ಇಂತಿಷ್ಟು ಡೆಸಿಬಲ್ ಗಿಂತ ಮೀರಬಾರದು ಎಂಬ ನಿಯಮವಿದ್ದು ಅದನ್ನು ಪಾಲಿಸುವಂತೆ ಸೂಚಿಸಿ ನೋಟೀಸು ನೀಡಲಾಗುತ್ತಿದೆ.
ಉಲಂಘಿಸಿದರೆ ಮುಂದಿನ ಕಾನೂನು ಕ್ರಮ ವಹಿಸುವ ಸೂಚನೆ ನೀಡಲಾಗಿದೆ. ಸರಕಾರ ಹಾಗೂ ಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಮಿಷನರ್ ತಿಳಿಸಿದರು.
ಸರಕಾರದ ಆದೇಶ ಹಾಗೂ ಹೈಕೋರ್ಟ್ ನಿರ್ದೇಶನದ ಪ್ರಕಾರ ಮಂಗಳೂರು ನಗರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದರು. ಆಝಾನ್ ಗೆ ಸಂಬಂಧಿಸಿ ಕೇವಲ ಮಸೀದಿಗಳನ್ನು ಗುರಿಯಾಗಿಸಿ ಪೊಲೀಸರು ನೋಟೀಸು ನೀಡುತ್ತಿದ್ದಾರೆ ಎಂಬುದು ತಪ್ಪುಗ್ರಹಿಕೆ. ಈ ರೀತಿ ಅಪಪ್ರಚಾರ ನಡೆಯುತ್ತಿರುವುದಕ್ಕೆ ಈ ಸ್ಪಷ್ಟನೆ ನೀಡುತ್ತಿರುವುದಾಗಿ ಕಮಿಷನರ್ ಹೇಳಿದರು.

















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ