ಮಂಗಳೂರು: ಎಸ್ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಫ್ಯಾಕ್ಟರಿಯ ಟ್ಯಾಂಕೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತಪಟ್ಟ ಕಾರ್ಮಿಕರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು ಎನ್ನಲಾಗಿದ್ದು, ಸಮಿರುಲ್ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಎಂದು ಗುರುತಿಸಲಾಗಿದೆ. ಮಿರಾಜುಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಗಾಯಗೊಂಡಿದ್ದಾರೆ.
ಎಸ್ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡಾ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿದೆ.
ಅಸ್ವಸ್ಥಗೊಂಡವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಮೂವರು ಮೃತಪಟ್ಟು 5 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಪೊಲೀಸರ ದೌಡು:
ರಾಸಾಯನಿಕ ಸೋರಿಕೆಯಾದ ಮಾಹಿತಿ ಸಿಗುತ್ತಿದ್ದಂತೆ ನಗರ ಪೊಲೀಸರು ಆಸ್ಪತ್ರೆ, ಫ್ಯಾಕ್ಟರಿಗೆ ದೌಡಾಯಿಸಿದ್ದಾರೆ. ನಗರ ಕಾನೂನು ಸುವ್ಯವಸ್ಥಾ ವಿಭಾಗದ ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಆಸ್ಪತ್ರೆಗೆ ಭೇಟಿ ಅನಾರೋಗ್ಯಕ್ಕೀಡಾದವರ ಯೋಗಕ್ಷೇಮ ವಿಚಾರಿಸಿದ್ದಾರೆ. ಡಿಸಿಪಿ ಹರಿರಾಂ ಶಂಕರ್, ಬಜಪೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ತ್ಯಾಜ್ಯದಿಂದ ವಿಷಾನಿಲ:
ಮೀನಿನ ತ್ಯಾಜ್ಯಕ್ಕೆ ಬಳಕೆ ಮಾಡುವ ವಿಷಾನಿಲ ಸೋರಿಕೆಯಾಗಿ ಈ ಘಟನೆ ನಡೆದಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಆದರೆ ಘಟನೆಯ ಸರಿಯಾದ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ. ಅವಘಡ ನಡೆದ ಹಿನ್ನಲೆಯಲ್ಲಿ ಫ್ಯಾಕ್ಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್