ನವದೆಹಲಿ,ಏ.20: ದೆಹಲಿಯ ಹಿಂಸಾಚಾರ ಪೀಡಿತ ಜಹಾಂಗೀರ್ ಪುರಿ ಪ್ರದೇಶಕ್ಕೆ ಆಗಮಿಸಿದ ಉತ್ತರ ನವದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ ಗೆ (ಎನ್ಡಿಎಂಸಿ) ಸೇರಿದ ಬುಲ್ಡೋಜರ್ಗಳು ಆ ಪ್ರದೇಶದಲ್ಲಿನ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಈ ಪ್ರದೇಶದಲ್ಲಿನ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ವೇಳೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು 400 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ನಾಗರಿಕ ಸಂಸ್ಥೆ ಕೇಳಿತ್ತು.
ಜಹಾಂಗೀರ್ ಪುರಿ ಧ್ವಂಸ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ನಾಳೆ ಮತ್ತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕರಣದ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಸಮ್ಮತಿಸಿದೆ.
ಜಹಾಂಗೀರ್ ಪುರಿಯಲ್ಲಿನ ಧ್ವಂಸವನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ನ ಆದೇಶದ ಕುರಿತು ಅರ್ಜಿದಾರರ ವಕೀಲರು ನಾಗರಿಕ ಸಂಸ್ಥೆ, ಪೊಲೀಸರು ಮತ್ತು ದೆಹಲಿ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ನ್ಯಾಯಾಲಯದ ಆದೇಶವನ್ನು ಅಧಿಕಾರಿಗಳು ಪಾಲಿಸುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ