ಸೂರತ್: ಕಠುವಾ ಮತ್ತು ಉನ್ನಾವ್ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲೇ, ಮತ್ತೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ.
ಗುಜರಾತ್ನ ಸೂರತ್ನಲ್ಲಿ 6ರಂದು 11 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಆ ಬಾಲಕಿಯ ಶವಪರೀಕ್ಷೆಯ ವರದಿಯು ಶನಿವಾರ ರಾತ್ರಿ ಪೊಲೀಸರಿಗೆ ಲಭ್ಯವಾಗಿದ್ದು, ಆಕೆಯ ಮೇಲೆ ಏಳು ದಿನ ಸತತವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಅದರಲ್ಲಿ ವಿವರಿಸಲಾಗಿದೆ.
‘ಸೂರತ್ನ ಕ್ರಿಕೆಟ್ ಮೈದಾನವೊಂದರ ಬಳಿಯ ಪೊದೆಯಲ್ಲಿ ಬಾಲಕಿಯ ಶವ ಬಿದ್ದಿದೆ ಎಂದು ಸಾರ್ವಜನಿಕರು ದೂರು ನೀಡಿದ್ದರು. ಬಾಲಕಿಯ ದೇಹದ ಎಲ್ಲೆಡೆ ಗಾಯಗಳಾಗಿದ್ದವು. ಆಕೆಯ ಮೇಲೆ ಹಲವು ಭಾರಿ ಅತ್ಯಾಚಾರ ನಡೆಸಲಾಗಿದೆ ಎಂಬುದು ಶವಪರೀಕ್ಷೆಯಲ್ಲಿ ಪತ್ತೆಯಾಗಿದೆ. ಆಕೆಯ ಗುರುತು ಪತ್ತೆಯಾಗಿಲ್ಲ. ಹೀಗಾಗಿ ನಾವೇ ಆಕೆಯ ಚಿತ್ರವನ್ನು ಪತ್ರಿಕೆಗಳು, ಫೇಸ್ಬುಕ್, ವಾಟ್ಸ್ಆ್ಯಪ್ಗಳಲ್ಲಿ ಪ್ರಕಟಿಸಿ ಪೋಷಕರನ್ನು ಹುಡುಕಲು ಪ್ರಯತ್ನಿಸುತ್ತಿದ್ದೇವೆ’ ಎಂದು ಸೂರತ್ ಪೊಲೀಸ್ ಆಯುಕ್ತ ಸತೀಶ್ ಶರ್ಮಾ ಮಾಹಿತಿ ನೀಡಿದ್ದಾರೆ.
‘ಈ ಪ್ರಕರಣದ ತನಿಖೆಗೆ ಅತ್ಯುತ್ತಮ ಅಧಿಕಾರಿಗಳನ್ನು ಒಳಗೊಂಡಿರುವ ತಂಡವನ್ನು ರಚಿಸಲಾಗಿದೆ. ತನಿಖೆಗೆ ನೆರೆಯ ರಾಜ್ಯಗಳ ಪೊಲೀಸರ ಸಹಕಾರವನ್ನೂ ಕೇಳಲಾಗಿದೆ’ ಎಂದು ಶರ್ಮಾ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ