ಬೆಳಗಾವಿ: ನಿಮ್ಮನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ ಎರಡೂವರೆ ಸಾವಿರ ಕೋಟಿ ಕೊಡಿ ಎಂದು ದೆಹಲಿಯಿಂದ ಒಂದು ಗ್ಯಾಂಗ್ ನನ್ನ ಬಳಿ ಬಂದಿತ್ತು ಎಂದು ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
2,500 ಕೋಟಿ ರೂ.ಕೊಡಿ ಎಂದು ದೆಹಲಿಯಿಂದ ಬಂದ ಕೆಲವರು ಹೇಳಿದ್ದರು. ಸಿಎಂ ಮಾಡ್ತೀವಿ ಅಂದಿದ್ರು. ನಾನು 2,500 ಕೋಟಿ ರೂ. ಅಂದರೆ ಏನು ಅಂತ ಭಾವಿಸಿದ್ದೀರಿ ಎಂದು ಕೇಳಿದ್ದೆ. ಆ 2,500 ಕೋಟಿ ರೂ. ಹೇಗೆ ಇಡುವುದು? ಕೋಣೆಯಲ್ಲಿ ಇಡುವುದಾ? ಗೋದಾಮಿನಲ್ಲಿ ಇಡುವುದಾ? ಎಂದು ಕೇಳಿದ್ದೆ ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ಯಾರೂ ಅಲ್ಲಿ ಇಲ್ಲಿ ಹೋಗಿ ಹಾಳಾಗಬೇಡಿ. ನಿಮಗೆ ಟಿಕೆಟ್ ಕೊಡಿಸುತ್ತೇವೆ. ದೆಹಲಿ ಕರೆದುಕೊಂಡು ಹೋಗ್ತೀವಿ, ಸೋನಿಯಾ ಗಾಂಧಿ ಭೇಟಿ ಮಾಡಿಸ್ತೀವಿ. ಜೆ.ಪಿ. ನಡ್ಡಾರನ್ನು ಭೇಟಿ ಮಾಡಿಸ್ತೀವಿ ಅಂತಾರೆ. ದೆಹಲಿಯಿಂದ ಒಂದಿಷ್ಟು ಜನ ನನ್ನ ಬಳಿಯೂ ಬಂದಿದ್ದರು. ನಿಮ್ಮನ್ನು ಸಿಎಂ ಮಾಡ್ತೀವಿ 2,500 ಕೋಟಿ ರೂ. ನೀಡಿ ಎಂದು ಹೇಳಿದ್ದರು ಎಂದು ಹೇಳಿದ್ದಾರೆ.
ನಾನು ನಾಟಕ ಮಾಡಿದ್ರೆ ಈಗಲ್ಲ. ಈ ಹಿಂದೆಯೇ ಸಿಎಂ ಆಗಿರುತ್ತಿದ್ದೆ. ಯಡಿಯೂರಪ್ಪಗೆ ಇತ್ತೀಚೆಗೆ ಪುತ್ರ ವ್ಯಾಮೋಹ ಬಂದು ಬಿಟ್ಟಿದೆ ಎಂದು ಮಾಜಿ ಸಿಎಂ ವಿರುದ್ಧ ವೈಮನಸ್ಯವನ್ನು ಹೊರಹಾಕಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ